ಬಳ್ಳಾರಿ,ಏ.14
ಬಳ್ಳಾರಿಯಲ್ಲಿ ಜರುಗಲಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏ.15 ರಂದು ಸಂಜೆ 05 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿನ ಬಿ.ಪಿ.ಎಸ್.ಸಿ (ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜ್) ಶರಣ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಅವರು ಪಾಲ್ಗೊಳ್ಳುವರು.
ಜನಪ್ರತಿನಿಧಿಗಳ, ಕನ್ನಡಪರ ಸಾಹಿತ್ಯ-ಸಾಂಸ್ಕೃತಿಕ ಸಂಘಟನೆಗಳ ಹಾಗೂ ವಿವಿಧ ಸಂಘಟನೆಗಳ, ಕಸಾಪ ಜಿಲ್ಲೆ ತಾಲೂಕು ಮತ್ತು ಹೋಬಳಿ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದ್ದು, ಸಹೃದಯ ಕನ್ನಡ ಅಭಿಮಾನಿಗಳು ಈ ಸಭೆಗೆ ಆಗಮಿಸಿ ಸಮ್ಮೇಳನದ ಯಶಸ್ವಿಯ ಹಿನ್ನೆಲೆಯಲ್ಲಿ ಸಲಹೆ-ಸೂಚನೆ ನೀಡಬೇಕು ಎಂದು ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರು ತಿಳಿಸಿದ್ದಾರೆ