ಬಳ್ಳಾರಿ,ಮಾ.19
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಏ.02 ರಂದು ದೇವರ ದಾಸಿಮಯ್ಯ ಜಯಂತಿ, ಏ.10 ರಂದು ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತು ಚರ್ಚಿಸಲು ಮಾ.24 ರಂದು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಮಾ.24 ರಂದು ಸಂಜೆ 4.30 ಗಂಟೆಗೆ ದೇವರ ದಾಸಿಮಯ್ಯ ಜಯಂತಿ, ಬಳಿಕ 05 ಗಂಟೆಗೆ ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು.
ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.