Ad image

ಮಹಾನಗರ ಪಾಲಿಕೆಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

Vijayanagara Vani

ರಾಯಚೂರು ಜುಲೈ 03: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಭಾರತ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಯಡಿ ಸರ್ವರಿಗೂ ಸೂರು ಒದಗಿಸುವ ಉದ್ದೇಶದಿಂದ ಪಾಲಿಕೆಯ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿಯಲ್ಲಿ ಫಲಾನುಭವಿಯು ವಿವಾಹಿತ ಮಹಿಳೆ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿಯಾಗಿರಬೇಕು. ಇವರನ್ನು ಹೊರತುಪಡಿಸಿ ಪುರುಷರಾಗಿದ್ದಲ್ಲಿ ಮಾಜಿ ಯೋಧರು, ವಿಧುರರು, ಅಂಗವಿಕಲರು, ಹಿರಿಯ ನಾಗರೀಕರು, ವಿಚ್ಚೇದಿತರು ಅರ್ಹರಾಗಿರುತ್ತಾರೆ. ಸರ್ಕಾರದ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಫಲಾನುಭವಿಯಾದವರು ಮತ್ತೆ ಅರ್ಜಿ ಸಲ್ಲಿಸಬಾರದು.
ದಾಖಲಾತಿಗಳು: ಆಧಾರ್ ಕಾರ್ಡ್ (ಮನೆಯ ಯಜಮಾನಿ/ ಹಾಗೂ ತಂದೆ/ ತಾಯಿ ಮತ್ತು ಪಡಿತರ ಚೀಟಿಯಲ್ಲಿ ಇರುವಂತಹ ಕುಟುಂಬ ಸದಸ್ಯರ ಆಧಾರ್ ಕಾರ್ಡಗಳು), ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬAಧಿಸಿದ ದಾಖಲೆಗಳು ಹಕ್ಕುಪತ್ರ/ ಕ್ರಯ ಪತ್ರ/ ದಾನ ಪತ್ರ/ ಉಡುಗೊರೆ ಪತ್ರ/ ಖಾತ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ನಿಗಧಿತ ನಮೂನೆ, ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ನೊಂದಿಗೆ ವೆಬ್‌ಸೈಟ್ ವಿಳಾಸ:  URL:http://pmay-urban.gov.in  ನಲ್ಲಿ ಜುಲೈ 15 ರೊಳಗಾಗಿ ಅರ್ಜಿಸಲ್ಲಿಸಿ, ಅರ್ಜಿಯ ಪ್ರತಿಯನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರಾಯಚೂರು ಮಹಾನಗರ ಪಾಲಿಕೆ ಆಶ್ರಯ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪಾಲಿಕೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";