Ad image

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Vijayanagara Vani
ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ ಜುಲೈ 01: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಭಾಗ್ಯನಗರ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಜರುಗಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಆಹಾರ ಧಾನ್ಯದ ಮಾಹಿತಿಯನ್ನು ಪಡಿತರ ಚೀಟಿದಾರರಿಗೆ ಹಾಗು ಗ್ಯಾರಂಟಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕೆಂದು ಸದಸ್ಯರು ತಿಳಿಸಿದರು. ಸದಸ್ಯೆ ಜ್ಯೋತಿ ಗೊಂಡಬಾಳ ಮಾತನಾಡಿ, ಸಾರ್ವಜನಿಕರಿಗೆ ಆಹಾರ ಧಾನ್ಯದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಇಲಾಖಾಧಿಕಾರಿಗಳು ಹೆಚ್ಚಿನ ಕ್ರಮವಹಿಸಬೇಕೆಂದರು.
ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಆಹಾರ ಧಾನ್ಯ ವಿತರಣೆಯಾಗಬೇಕು. ವಿನಾಕಾರಣ ಆಹಾರ ಧಾನ್ಯ ವಿತರಣಾ ಕೇಂದ್ರ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವ ಪ್ರಕರಣಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಅಧ್ಯಕ್ಷರು ಸೂಚಿಸಿದರು.
ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕಗಳನ್ನು ಅಳವಡಿಸಿಲ್ಲವೆಂದು ಸದಸ್ಯರು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ಕೂಡಲೇ ಅಳವಡಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮೀ ಯೋಜನೆಯ ಕುರಿತು ಜವಳಿ ಇಲಾಖೆಯಲ್ಲಿ ಉದ್ದಿಮೆ ಪರವಾನಿಗೆ ಪಡೆಯಲು ಜಿ.ಎಸ್.ಟಿ ಹೊಂದಿದ ಬಡ ನೇಕಾರರಿಗೆ ಗೃಹಲಕ್ಷ್ಮಿ ಸೌಲಭ್ಯ ಕಲ್ಪಿಸಲು ಅವಕಾಶ ಇರುವುದಿಲ್ಲವೆಂದು ಭಾಗ್ಯನಗರ ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಹೊನ್ನೂರಸಾಬ ಬೈರಾಪುರ ಸಭೆಗೆ ವಿವರಿಸಿದರು.
ಜಿಎಸ್‌ಟಿ ಹೊಂದಿರುವವರಿಗೆ ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ಅರ್ಹರಲ್ಲವೆಂದು ಇಲಾಖಾಧಿಕಾರಿಗಳು ವಿವರಿಸಿದರು. ತಾಂತ್ರಿಕ ಸಮಸ್ಯೆಯಿಂದ ಫೆಬ್ರುವರಿ, ಮಾರ್ಚ್ ಮಾಹೆಯ ಗೃಹಲಕ್ಷ್ಮಿ ಹಣ ಜಮೆಯಾಗಿರುವುದಿಲ್ಲವೆಂದು ಇಲಾಖಾಧಿಕಾರಿಗಳು ಸಭೆಯಲ್ಲಿ ಗಮನಕ್ಕೆ ತಂದರು.
ಅನಧಿಕೃತವಾಗಿ ಅಕ್ಕಿ ಖರೀದಿದಾರರ ಮೇಲೆ ಎಫ್.ಐ.ಆರ್ ದಾಖಲಿಸಲು ಸಭೆಯಲ್ಲಿ ಅಧ್ಯಕ್ಷರು ಆಹಾರ ಇಲಾಖಾಧಿಕಾರಿಗಳಿಗೆ ನಿರ್ದೇಶಿಸಿದರು.
ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿತ್ತು. ಸ್ವಲ್ಪ ಬದಲಾವಣೆ ಮಾಡಿ ಪ್ರತಿ 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪಳ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಭಾಗ್ಯನಗರ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ತುಕಾರಾಮಪ್ಪ ಗಡಾದ, ಉಪಾಧ್ಯಕ್ಷರಾದ ಹೊನ್ನೂರಸಾಬ ಬೈರಾಪುರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವರಾಮ, ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ರಾಮಣ್ಣ ಚೌಡ್ಕಿ, ರಮೇಶ ಹ್ಯಾಟಿ, ಸವಿತಾ ಗೊರಂಟ್ಲಿ, ಅನ್ನದಾನಯ್ಯಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಧರ್ಮರಾಜರಾವ್, ಲಕ್ಷ್ಮಣ ಡೊಳ್ಳಿನ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಇಲಾಖಾಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

Share This Article
error: Content is protected !!
";