ಚಿತ್ರದುರ್ಗಮಾರ್ಚ್.28:
ಚಿತ್ರದುರ್ಗ ಹಾಗೂ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಮಾರ್ಚ್ 20 ರಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆಗೆ ಅನುಮೋದಿಸಿದೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರದ ಬಾಲಭವನದ ಕಚೇರಿಯಲ್ಲಿ ಹಾಗೂ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಆಯ್ಕೆ ಪಟ್ಟಿಯನ್ನು ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆ ಹತ್ತಿರದ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 5 ಸಂಜೆ 5:30 ಒಳಗೆ ಸದರಿ ಕಚೇರಿಗಳಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ