ಆದ್ಯತೆಯ ಮೇಲೆ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಶಾಸಕ ಬಸನಗೌಡ ದದ್ದಲ್ರಾಯಚೂರು,ಜೂ.25ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ ಜಲ ಜೀವನ್ ಮಿಷನ್ ಯೋಜನೆಯಡಿ ನಳ್ಳಿ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕೆಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಜೂ.25ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಯಚೂರು ತಾಲೂಕು ಪಂಚಾಯತ್ ತ್ರೆಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತಾನಾಡಿದರು.ಜಲ ಜೀವನ್ ಮಿಷನ್ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಯೋಜನೆಗಳು, ಅಭಿವೃದ್ಧಿ ಕಾರ್ಯ, ಕಾರ್ಯಕ್ರಮಗಳು ನಿಗದಿತ ಅವಧಿಯೊಳಗೆ ಗರಿಷ್ಠ ಅನುದಾನ ಬಳಕೆಯೊಂದಿಗೆ ಅನುಷ್ಠಾನಗೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ಅವಶ್ಯಕತೆಗನುಗುಣವಾಗಿ ನಡೆಯಬೇಕು ಎಂದುರು.
ತಾಲೂಕಿನ ಎಲ್ಲಾ ಕಡೆಗೆ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಬೇಕು. ಹಾಗೂ ಖಾಸಗಿ ರಸ ಗೊಬ್ಬರ ಅಂಗಡಿಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ಮಾರಾಟ ಮಾಡಿದಲ್ಲಿ ಕ್ರಮ ವಹಿಸಬೇಕೆಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಶೇ.55ರಷ್ಟು ಬಿತ್ತನೆ ಕಾರ್ಯ ಆರಂಭವಾಗಿದ್ದು, ತಾಲೂಕಿನಲ್ಲಿರುವ 5 ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ಹಾಗೂ ರಸಗೊಬ್ಬರ ವಿತರಣೆ ಮಾಡಲಾಗಿದೆ. ಬೀಜ ಹಾಗೂ ರಸಗೊಬ್ಬರ ಕಡಿಮೆಯಾದಲ್ಲಿ ಜಿಲ್ಲಾ ಕೇಂದ್ರದಿ0ದ ಸರಬರಾಜು ಮಾಡಲಾಗುವುದು. ಬಿತ್ತನೆ ಬೀಜ ದಾಸ್ತಾನು ಸಂಬAಧಿಸಿದAತೆ, ಭತ್ತ 308 ಕ್ವಿ. ದಾಸ್ತಾನು ಮಾಡಿದ್ದು, ಅದರಲ್ಲಿ 228 ಕ್ವಿಂಟಲ್ ವಿತರಣೆ ಮಾಡಲಾಗಿದೆ. ತೊಗರಿ 195.6 ಕ್ವಿ ದಾಸ್ತಾನು ಮಾಡಿದ್ದು, 162.05 ವಿತರಣೆ ಮಾಡಲಾಗಿದೆ. ಹೆಸರು 1.45 ಕ್ವಿಂ ದಾಸ್ತಾನು ಮಾಡಿದ್ದು, 1.15 ಕ್ವಿಂ ವಿತರಣೆ ಮಾಡಲಾಗಿದೆ. ಸಜ್ಜೆ 2.1 ಕ್ವಿಂ ದಾಸ್ತಾನು ಮಾಡಿದ್ದು,1.89 ಕ್ವಿಂ ವಿತರಿಸಲಾಗಿದೆ. ರಸ ಗೊಬ್ಬರ ತಾಲೂಕಿನಲ್ಲಿ 13,939 ಮೆಟ್ರಿಕ್ ಟನ್ ಬೇಡಿಕೆಯಿದ್ದು, 20,179 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ ಎಂದು ರಾಯಚೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಆರ್. ಅವರು ಶಾಸಕರ ಗಮನಕ್ಕೆ ತಂದರು.
ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ಮಹೇಶ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಹೆಚ್ಚುವರಿಯಾಗಿ ತೋಟಗಾರಿಕೆ ಬೆಳೆ ವಿಸ್ತೀರ್ಣ ಮಾಡುತ್ತಿದ್ದು, ತೋಟಗಾರಿಕೆ ಮಾಡಲು 600 ರೈತರು ಮುಂದಾಗಿದ್ದಾರೆ. ಮಾವು ಮತ್ತು ಮೋಸಂಬಿ ಬೆಳೆಯಲು ಮುಂದಾಗಿದ್ದಾರೆ. ನರೇಗಾ ಯೋಜನೆಯಡಿಯಲ್ಲಿ ಸಸಿ ವಿತರಣೆ ಮತ್ತು ಇತರೆ ಕೆಲಸ ಪ್ರಗತಿಯಲ್ಲಿದೆಂದರು.
ತಾಲೂಕಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 587 ಅತಿಥಿ ಶಿಕ್ಷಕರು, ಪ್ರೌಢಶಾಲಾ ವಿಭಾಗದಲ್ಲಿ 151 ಅತಿಥಿ ಶಿಕ್ಷಕರು ಅಗತ್ಯವಿದ್ದು, 140 ನೇಮಕಾತಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರೌಢ ಶಾಲಾ ವಿಭಾಗಕ್ಕೆ ಇನ್ನು 11 ಅತಿಥಿ ಶಿಕ್ಷಕರ ಅವಶ್ಯಕತೆಯಿದೆ. ಶಿಶು ಅಭಿವೃದ್ಧಿ ಯೋಜನೆಯಡಿ ಎಲ್ಲಾ ಅಂಗನವಾಡಿಗಳಿಗೆ ಇಲಾಖೆಯಿಂದ ನೀಡುವ ಅಹಾರವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿಯಿಂದ ಯು.ಕೆ.ಜಿ, ಆರಂಭವಾಗಿದ್ದು, ದಾಖಲಾತಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಮೆಹಬೂಬಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಪ್ರಕಾಶ ವಡ್ಡರ್, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಡಿವೈಎಸ್ಪಿ ಸತ್ಯ ನಾರಾಯಣ, ರಾಯಚೂರು ಆರ್.ಎಪಿ.ಎಂ.ಸಿ ಅಧ್ಯಕ್ಷ ಹಾಗೂ ತಾಲೂಕ ಪಂಚಾಯತ ಇಒ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ವಿವಿಧ ಪಂಚಾಯತ್ ಪಿಡಿಒಗಳು ಸಭೆಯಲ್ಲಿ ಇದ್ದರು.