ಗಂಗಾವತಿ: ಭಾರತದ ಭವ್ಯ ಪ್ರಜಾಪ್ರಭುತ್ವದ ಹಬ್ಬವಾದ ಲೋಕಸಭಾ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಈ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜಶೇಖರ್ ಹಿಟ್ನಾಳ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಾರ್ಯಾಲಯದ ಆವರಣದ ಮುಂದೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಸಚಿವ ಶಿವರಾಜ್ ತಂಗಡಿಗೆ ಅವರ ಜೊತೆ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮುಖಂಡ ಎಸ್ ಬಿ ಖಾದ್ರಿ ಮಾತನಾಡಿ ರಾಜ್ಯದಲ್ಲಿ ಒಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲ ದಾಯಕವಾಗಿದೆ ಎಂದು ಸಂತಸ ಪಟ್ಟರು ಜೊತೆಗೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ನಗರ ಘಟಕ ಉಪಾಧ್ಯಕ್ಷ ಜುಬೇರ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ರಾಜಶೇಖರ್ ಹಿಟ್ನಾಳ್ ಅವರು 45,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು ನಮ್ಮ ನಾಯಕರಾದ ಇಕ್ಬಾಲ್ ಅನ್ಸಾರಿ ಅವರ ಪರಿಶ್ರಮ ಪ್ರಮುಖವಾಗಿದ್ದು ಮುಂದಿನ ಹಂತ ಹಂತದ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಜೊತೆಗೆ ರಾಜ್ಯ ಸರ್ಕಾರದ ಆಡಳಿತದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಆಗಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಪ್ರಹ್ಲಾದ ನಾಗರಾಜ್ ಕೊತ್ವಾಲ್ ಸೇರಿದಂತೆ ಅಪಾರ ಕಾರ್ಯಕರ್ತರು ಪಾಲ್ಗೊಂಡಿದ್ದರು.