Ad image

ಡಿ.14 ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ರಾಷ್ಟೀಯ ಲೋಕ ಅದಾಲತ್

Vijayanagara Vani

ಬಳ್ಳಾರಿ,ಡಿ.03

- Advertisement -
Ad imageAd image

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಇವರ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ವತಿಯಿಂದ ಡಿ.14 ರಂದು ಬೆಳಿಗ್ಗೆ 10 ಗಂಟೆಗೆರಾಷ್ಟ್ರೀಯ ಲೋಕ ಅದಾಲತ್‌ನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಅದಾಲತ್‌ನಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಉಭಯ ಪಕ್ಷಗಾರರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———-

Share This Article
error: Content is protected !!
";