Ad image

ಜು.13 ರಂದು ರಾಷ್ಟ್ರೀಯ ಲೋಕ ಅದಾಲತ್

Vijayanagara Vani
ಜು.13 ರಂದು ರಾಷ್ಟ್ರೀಯ ಲೋಕ ಅದಾಲತ್
ಬಳ್ಳಾರಿ,ಜೂ.27
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ನ್ನು ಜುಲೈ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳು ಸುವರ್ಣ ಅವಕಾಶವಾಗಿದೆ.
*ವಿಶೇಷ ಸೂಚನೆ:*
ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ಗಳು ನಡೆಯುತ್ತಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share This Article
error: Content is protected !!
";