ಕಾರವಾರ, ಅ.25 – ಪ್ರವಾಸಿಗರನ್ನು ಮತ್ತು ಮಕ್ಕಳನ್ನು ಆಕರ್ಷಿಸಲು ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಮಕ್ಕಳ ಆಟಿಕೆ ವ್ಯವಸ್ಥೆ ಹಾಗೂ ಜೀಪ್ ಲೈನ್ ನಂತಹ ಸಾಹಸ ಚಟುವಟಿಕೆಗಳನ್ನು ಅಳವಡಿಸಲು ಯೋಜನೆ ರೂಪಿಸಲು ಚಿಂತಿಸಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಸಿ ಹೇಳಿದರು.
ಅವರು ಶುಕ್ರವಾರ ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿಸದರು.
ಸಮುದ್ರ ತೀರದಲ್ಲಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದ ನಿರ್ವಹಣೆಗೆ ಈ ಬಾರಿ ಹೆಚ್ಚುವರಿ ಅನುದಾನ ನೀಡಿರುವದರಿಂದ ಪ್ರವಾಸಿಗರನ್ನು ಆಕರ್ಷಿಸಲು ಪ್ರಸಕ್ತ ಸಾಲಿನಲ್ಲಿ ಮಕ್ಕಳ ಅಟಿಕೆ ಸಾಮಾಗ್ರಿ, ಪರಿಸರ ಸ್ನೇಹಿ ಕುರ್ಚಿಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸುಮಾರು 4.5 ಕೋಟಿ ವೆಚ್ಚದಲ್ಲಿ ಕೆ-ಶೋರ್ ಯೋಜನೆಯಡಿ ಸಮುದ್ರ ಜೀವಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ (ಮರೇನ್ ಫೌನಾ ರೆಸ್ಕೂö್ಯ ಆಂಡ್ ರಿಹ್ಯಾಬಿಲಿಟೇಶನ್ ಸೆಂಟರ್) ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಕೇಂದ್ರ ಸ್ಥಾಪನೆಯಾದಲ್ಲಿ ಅಳವಿನಂಚಿನಲ್ಲಿರುವ ಜೀವಿಗಳ ಸಂರಕ್ಷಣೆ ಮತ್ತು ಅವುಗಳ ಅಧ್ಯನಕ್ಕೆ ಅನುಕೂಲವಾಗಲಿದೆ ಹೀಗಾಗಿ ಸಮಿತಿ ಸದಸ್ಯರ ಸಲಹೆ ಸಹಕಾರ ಆಗತ್ಯವಾಗಿದೆ ಎಂದರು.
ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಡಿ ನಾಯ್ಕ, ಸ್ನಾತಕೋತ್ತರ ಪದವಿ ಕೇಂದ್ರದ ಆಡಳಿತಾಧಿಕಾರಿ ಡಾ. ಶಿವಕುಮಾರ್ ಹರಗಿ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ನಾಯ್ಕ, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಯ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಿರಣ, ಉಪ ವಿಜ್ಞಾನ ಕೇಂದ್ರದ ಅಧಿಕಾರಿಗಳು, ದವೇಕರ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರು ಮತ್ತಿತ್ತರರು ಉಪಸ್ಥಿತರಿದ್ದರು.