Ad image

ಜು.10 ಮತ್ತು 12 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

Vijayanagara Vani
ಮಡಿಕೇರಿ ಜು.08-ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಲೋಕಾಯುಕ್ತ ಅಧಿಕಾರಿಗಳು ಜುಲೈ, 10 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜುಲೈ, 12 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಜು.11 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ
ಮಡಿಕೇರಿ ಜು.08(ಕರ್ನಾಟಕ ವಾರ್ತೆ):-ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಮಾನ್ಯ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ಜುಲೈ, 11 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಅವರು ತಿಳಿಸಿದ್ದಾರೆ.

Share This Article
error: Content is protected !!
";