ಬಳ್ಳಾರಿ,ಆ.20
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಬುಧವಾರ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಅವರು ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
“ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲಾ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೇ ಸಮಾಲೋಚನೆ ಹಾಗೂ ಸಂವಿಧಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ” ಎಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ರೋಜಮೇರಿ, ವಿಜಯಕುಮಾರ್, ವಿ.ಹನುಮಂತ, ಮಲ್ಲೇಶಪ್ಪ, ಹನುಮೇಶ.ಹೆಚ್., ತೇಜ ಮತ್ತು ದಿವಾಕರ ಇದ್ದರು
ವಾರ್ತಾ ಇಲಾಖೆಯಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ
