Ad image

ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ಜಿಲ್ಲೆಯಲ್ಲಿ 27,830 ವಿದ್ಯಾರ್ಥಿಗಳಿಂದ ನೋಂದಣಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Vijayanagara Vani
ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ಜಿಲ್ಲೆಯಲ್ಲಿ 27,830 ವಿದ್ಯಾರ್ಥಿಗಳಿಂದ ನೋಂದಣಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ  ಫೆ, 27: ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯ 27,830 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಪರೀಕ್ಷೆಗಳು ಪಾರದರ್ಶಕವಾಗಿ, ನಿಯಮಾನುಸಾರ ಜರುಗುವಂತೆ ಪಿ.ಯು ಇಲಾಖೆ ಹಾಗೂ ಜಾಗೃತಿದಳದ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು (ಫೆ.27) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಿದ್ಧತೆ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ 13,100 ವಿದ್ಯಾರ್ಥಿಗಳು ಹಾಗೂ 14,730 ವಿದ್ಯಾರ್ಥಿನಿಯರಿದ್ದಾರೆ. ಕಲಾ ವಿಭಾಗದಲ್ಲಿ 5,413, ವಾಣಿಜ್ಯ ವಿಭಾಗದಿಂದ 8,464 ಮತ್ತು ವಿಜ್ಞಾನ ವಿಭಾಗದಿಂದ 13,953 ವಿದ್ಯಾರ್ಥಿಗಳು, ಒಟ್ಟು 27,830 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟಾರೆ 173 ಕಾಲೇಜುಗಳಿದ್ದು, 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪರೀಕ್ಷೆಯ ನೋಡಲ್ ಅಧಿಕಾರಿಯಾಗಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು ಉತ್ತರ ಪತ್ರಿಕೆ ವಾಲಕರು ಹಾಗೂ ಸ್ಥಾನಿಕ ಜಾಗೃತ ದಳ, ತಾಲೂಕ ಜಾಗೃತ ದಳ ಮತ್ತು ಜಿಲ್ಲಾ ಜಾಗೃತ ದಳ ಸದಸ್ಯರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಯಾವುದು ಇರುವುದಿಲ್ಲ. ಹೆಸ್ಕಾಂ ಅಧಿಕಾರಿಗಳಿಗೆ ಪರೀಕ್ಷಾ ದಿನದಂದು ತಡೆರಹಿತ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಖಜಾನೆ ಅಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಠೇವಣಿ ಇರಿಸಲು ಹಾಗೂ ಪರೀಕ್ಷಾ ದಿನಗಳಂದು ನಿಗದಿತ ಸಮಯದಲ್ಲಿ ಮಾರ್ಗಾಧಿಕಾರಿಗಳಿಗೆ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಮಾರ್ಗಾಧಿಕಾರಿಗಳ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಪ್ರಶ್ನೆ ಪ್ರತಿಕೆಗಳನ್ನು ಸ್ವೀಕರಿಸಲು ಹಾಗೂ ಪರೀಕ್ಷಾ ದಿನದಂದು ಮಾರ್ಗಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಖಜಾನೆ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ತ್ರಿ ಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳ, ತಾಲೂಕ ಜಾಗೃತ ದಳ ಹಾಗೂ ಜಿಲ್ಲಾ ಜಾಗೃತ ದಳಗಳನ್ನು ನೇಮಕ ಮಾಡುತ್ತಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಜಿಲ್ಲಾ ಪಂಚಾಯತ ಧಾರವಾಡ ಕಚೇರಿಯಲ್ಲಿ ಪರೀಕ್ಷಾ ಕೇಂದ್ರಗಳ ಘಟನಾವಳಿಗಳನ್ನು ವೀಕ್ಷಿಸಲು ಲೈವ್ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದನ್ನು 24*7 ವೀಕ್ಷಣೆಗಾಗಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಪಿಯುಸಿ ಪರೀಕ್ಷೆಗಳ ಕುರಿತಂತೆ ಭಯ, ಆತಂಕ ಮತ್ತು ಅನುಮಾನಗಳ ನಿವಾರಣೆಗಾಗಿ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ವೇದಿಕೆಯಲ್ಲಿದ್ದು, ಯಶಸ್ವಿಯಾಗಿ ಪರೀಕ್ಷಾಯನ್ನು ಆಯೋಜಿಸಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಧಾರವಾಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಕೆ.ಪಿ. ಅವರು ಸ್ವಾಗತಿಸಿ, ಪರೀಕ್ಷಾ ಸಿದ್ಧತೆಗಳನ್ನು ಸಭೆಯಲ್ಲಿ ವಿವರಿಸಿದರು. ಸಭೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಪಿಯು ಶಿಕ್ಷಣ ಇಲಾಖೆಯ ಪರೀಕ್ಷಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಪರೀಕ್ಷಾ ವೇಳಾಪಟ್ಟಿ: ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ನಿಗಧಿತ ದಿನದಂದು ಪರೀಕ್ಷೆಗಳ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ.
ಮಾರ್ಚ್ 1, 2025 ರಂದು ಕನ್ನಡ ಮತ್ತು ಅರೆಬಿಕ್ ವಿಷಯ, ಮಾರ್ಚ್ 3 ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ಹಾಗೂ ಮಾರ್ಚ್ 4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ ಮತ್ತು ಫ್ರೆಂಚ್ ವಿಷಯದ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 7 ರಂದು ಇತಿಹಾಸ, ಭೌತಶಾಸ್ತ್ರ, ಮಾರ್ಚ್ 10 ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮತ್ತು ಗೃಹ ವಿಜ್ಞಾನ, ಮಾರ್ಚ್ 12 ರಂದು ಮನಃಶಾಸ್ತ್ರ, ರಾಸಾಯನಶಾಸ್ತ್ರ ಮತ್ತು ಮೂಲ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.
ಮಾರ್ಚ್ 13 ರಂದು ಅರ್ಥಶಾಸ್ತ್ರ, ಮಾರ್ಚ್ 15 ರಂದು ಇಂಗ್ಲಿμï, ಮಾರ್ಚ್ 17 ರಂದು ಭೂಗೋಳಶಾಸ್ತ್ರ, ಮಾರ್ಚ್ 18 ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮಾರ್ಚ್ 19 ರಂದು ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ ರೀಟೈಲ್, ಆಟೋಮೊಬೈಲ್ ಹೆಲ್ತ್ ಕೇರ್, ಬ್ಯೂಟಿ ಆ್ಯಂಡ ವೆಲ್ನೆಸ್ ಹಾಗೂ ಮಾರ್ಚ್ 20 ರಂದು ಹಿಂದಿ ಪರೀಕ್ಷೆ ನಡೆಯಲಿವೆ.

Share This Article
error: Content is protected !!
";