Ad image

ನೀರಾವರಿ ಸಲಹಾ ಸಮಿತಿ ವೇಳಾಪಟ್ಟಿಯಂತೆ ಕಾಲುವೆಗಳಿಗೆ ನೀರು ಬಿಡುಗಡೆ

Vijayanagara Vani
ಬಳ್ಳಾರಿ,ಮಾ.29
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬಿತ್ತನೆ ವಿಳಂಬವಾಗಿ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ಕುಡಿಯುವ ನೀರು ಒಳಗೊಂಡ0ತೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್ ನ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ ಅವರು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
*ನೀರು ಹರಿಸುವ ಕಾಲಾವಧಿ:*
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ:
ಎಡದಂಡೆ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರವರೆಗೆ ಕುಡಿಯುವ ನೀರು ಒಳಗೊಂಡoತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ ನಂತೆ ಹರಿಸಲಾಗುವುದು.
ಎಡದಂಡೆ ವಿಜಯನಗರ ಕಾಲುವೆ:
ಏ.11 ರಿಂದ ರಿಂದ ಮೇ 10 ರವರೆಗೆ 150 ಕ್ಯೂಸೆಕ್ ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ:
ಬಲದಂಡೆ ಕೆಳಮಟ್ಟದ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರ ವರೆಗೆ ಕುಡಿಯುವ ನೀರು ಒಳಗೊಂಡ0ತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್ ನಂತೆ ಹರಿಸಲಾಗುವುದು.
ರಾಯ ಬಸವಣ್ಣ ಕಾಲುವೆ:
ಏ.01 ರಿಂದ ಮೇ 31 ರವರೆಗೆ ಲಭ್ಯವಾಗುವ ನೀರನಲ್ಲಿ 200 ಕ್ಯೂಸೆಕ್ ನಂತೆ ಹರಿಸಲಾಗುವುದು.
ನದಿ ಪೂರಕ: ಸುಮಾರು 90 ಕ್ಯೂಸೆಕ್ ನಂತೆ ನದಿ ಪೂರಕ ಕಾರ್ಖಾನೆ ಒಳಗೊಂಡoತೆ ನೀರು ಹರಿಸಲಾಗುವುದು.
*ರೈತ ಭಾಂದವರಲ್ಲಿ ಮನವಿ:*
ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಹಿಂಗಾರು ಹಂಗಾಮಿನ ಬೆಳೆದು ನಿಂತ ಬೆಳಗಳನ್ನು ಸಂರಕ್ಷಿಸಲು ಹಾಗೂ ಕುಡಿಯುವ ನೀರು ಒಳಗೊಂಡ0ತೆ ಹರಿಸಲಾಗುವುದು.
ಹಾಗಾಗಿ ರೈತರು ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು ಎಂದು ರೈತ ಭಾಂದವರಲ್ಲಿ ಕೋರಲಾಗಿದೆ.
ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ, ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";