ಚಿತ್ರದುರ್ಗಜೂನ್.28:
ಚಿತ್ರದುರ್ಗ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ 2024-25ನೇ ಸಾಲಿನ ಉಪವಿಭಾಗ ಮಟ್ಟದ ಒಂದನೇ ತ್ರೈಮಾಸಿಕ ಸಫಾಯಿ ಕರ್ಮಚಾರಿಗಳ ನಿಗಾ ಉಸ್ತುವಾರಿ ಸಮಿತಿ ಸಭೆಯನ್ನು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಪೌರ ಕಾರ್ಮಿಕರ ಕುಂದುಕೊರತೆಗಳು, ಸೌಲಭ್ಯಗಳು, ಸಿಬ್ಬಂದಿ ನೇಮಕಾತಿ ಹಾಗೂ ನಗರಗಳಲ್ಲಿನ ಬಡಾವಣೆಗಳಲ್ಲಿ ಸ್ವಚ್ಚತೆ ಮತ್ತು ನೈರ್ಮಲ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ ವಿ.ಕೃಷ್ಣಮೂರ್ತಿ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ 2024ನೇ ಸಾಲಿನ ಎರಡನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲೆ ನಡೆದಿರುವ ದೌರ್ಜನ್ಯ, ಜಾತಿ ನಿಂದನೆ, ಅತ್ಯಾಚಾರ, ಕೊಲೆ ಇನ್ನಿತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗಾಧಿಕಾರಿ ಎಂ.ಕಾರ್ತಿಕ್, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ ವಿ.ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.