Ad image

ಸಂಡೂರು ಪುರಸಭೆ: ಆಕ್ಷೇಪಣೆಗಳಿಗೆ ಆಹ್ವಾನ

Vijayanagara Vani
ಸಂಡೂರು ಪುರಸಭೆ: ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಮಾ.26
ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆಯ ಹತ್ತಿರ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಂಡೂರು ಪುರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಫಲಾನುಭವಿಗಳ ಹೆಸರು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳಲ್ಲಿ ಬದಲಾವಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಪುರಸಭೆಗೆ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪ್ರಸ್ತುತ ನಿವೇಶನ ಹೊಂದಿದ, ವಸತಿ ಸೌಲಭ್ಯ ಪಡೆದ ಫಲಾನುಭವಿಗಳು ಕಂಡುಬAದಲ್ಲಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಏ.01 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಡೂರು ಪುರಸಭೆ ಕಚೇರಿಗೆ ಸಂಪರ್ಕಿಸಬಹು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";