ಬಳ್ಳಾರಿ,ಜೂ.02
ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26ನೇ ಶೈಕ್ಷಣಿಕ ವರ್ಷ ಸಾಲಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಹಾಗೂ ಇತರೆ ವರ್ಗದ ಬಾಲಕ ಮತ್ತು ಬಾಲಕಿಯರು ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ State Hostel Portal ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿವರಗಳನ್ನು ಸೂಕ್ತ ದಾಖಲೆಗಳೊಂದಿಗೆ ನಗರದ ನಲ್ಲಚೇರವು ಪ್ರದೇಶದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.9110224569 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.