Ad image

ನಿಗದಿಪಡಿಸಿದ ಕಾಲಮಿತಿಯಲ್ಲಿ ಕೆಲಸ ಮುಗಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Vijayanagara Vani
ನಿಗದಿಪಡಿಸಿದ ಕಾಲಮಿತಿಯಲ್ಲಿ ಕೆಲಸ ಮುಗಿಸಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ ಮಾರ್ಚ್ 20  ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ಮಾಡಿ ಮುಗಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಹುಲಿಗಿ ಕ್ಷೇತ್ರದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯ ಇತರೆ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಬೇಕು. ತಾವು ಮಾಡುವ ಕೆಲಸಕ್ಕೆ ಸ್ಪಷ್ಟತೆ ಇರಬೇಕು ಅಂದಾಗ ಮಾತ್ರ ಅವುಗಳು ಕಾಲಮಿತಿಯಲ್ಲಿ ಮುಗಿಯುತ್ತವೆ ಇಲ್ಲವಾದರೆ ವಿಳಂಬವಾಗುತ್ತವೆ ಎಂದು ಹೇಳಿದರು.
ಕೊಪ್ಪಳ ಕೋಟೆಯ ಆವರಣದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಲಾಗುವುದು. ಇದರಿಂದ ಬರುವ ದಿನಗಳಲ್ಲಿ ಹೆಚ್ಚು ಜನರು ಇಲ್ಲಿಗೆ ಭೇಟಿ ನೀಡುವರು ಮತ್ತು ಇಲ್ಲಿ ಇರುವ ಹಲವಾರು ಐತಿಹಾಸಿಕ ಪ್ರವಾಸಿ ತಾಣಗಳನ್ನು ಪರಿಚಯಿಸಲು ಅನುಕೂಲವಾಗುತ್ತದೆ. ವೆಂಕಟಪ್ಪ ಭಾವಿ ಹತ್ತಿರ ಬಹಳಷ್ಟು ಮರಗಳು ಬೆಳೆದಿರುವುದರಿಂದ ಅದನ್ನು ಸ್ವಚ್ಚಗೊಳಿಸುವ ಕಾರ್ಯ ಮಾಡಬೇಕು. ಹಿರೇಬೆಣಕಲ್ಲಿನ ಮೋರೆರ ಬೆಟ್ಟದ ಕುರಿತು ಮಾಹಿತಿ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಸಂಬಂಧಿಸಿದ ಇತರೆ ವಿಷಯಗಳೆನಾದರು ಇದ್ದರೆ ತಿಳಿಸಿ ಎಂದಾಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು 2024-25ನೇ ಸಾಲಿನಲ್ಲಿ ಎಸ್.ಸಿ.ಪಿ. ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಎಂಟ್ರಪೇನರಶಿಫ್ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡುವುದರ ಜೊತೆಗೆ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ಪರಿಶಿಷ್ಟ ಜಾತಿಯ-11 ಹಾಗೂ ಪರಿಶಿಷ್ಟ ಪಂಗಡದ-7 ಅರ್ಜಿಗಳು ಸ್ವೀಕೃತವಾಗಿವೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಅವರು ಅಪರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕರಾದ ಪ್ರಕಾಶ್ ವಡ್ಡರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ, ಎನ್.ಐ.ಸಿ ಅಧಿಕಾರಿ ಬಸವರಾಜ. ಕೊಪ್ಪಳ ನಗರಸಭೆ ಆಯುಕ್ತರಾದ ಗಣಪತಿ ಪಾಟೀಲ್ ಹಾಗೂ ಅರಣ್ಯ ಇಲಾಖೆ ಸೇರಿದಂತೆ ಇತರೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";