Ad image

ಬಿತ್ತನೆ ಬೀಜ ಪೂರೈಕೆ

Vijayanagara Vani
ಬಿತ್ತನೆ ಬೀಜ ಪೂರೈಕೆ
ಮಡಿಕೇರಿ ಜೂ.26-ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 557.2 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.15.7 ರಷ್ಟು ಕಡಿಮೆ ಮಳೆಯಾಗಿದೆ.
ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿದೆ, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 2171 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1237.3 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿರುತ್ತವೆ. ಇಲ್ಲಿಯವರೆಗೆ 691.15 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಹಾಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 43 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ 75 ಕ್ವಿಂ, ನಾಪೆ: 24.75 ಕ್ವಿಂ, ಭಾಗಮಂಡಲ:8.5 ಕ್ವಿಂ, ಹಾಗೂ ಸಂಪಾಜೆ:6 ಕ್ವಿಂ.ಗಳು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 86.51 ಕ್ವಿಂಟಾಲ್ ದಾಸ್ತಾನು ಇದ್ದು, ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ : 23.8 ಕ್ವಿಂ, ಶನಿವಾರಸಂತೆ: 29.25 ಕ್ವಿಂ, ಹಾಗೂ ಕೊಡ್ಲಿಪೇಟೆ: 32.5 ಕ್ವಿಂ.ಗಳು, ಕುಶಾಲನಗರ ತಾಲ್ಲೂಕಿನಲ್ಲಿ ಒಟ್ಟು 66.76 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:61.01 ಕ್ವಿಂ, ಸುಂಟಿಕೊಪ್ಪ:5.75 ಕ್ವಿಂ.ಗಳು, ವೀರಾಜಪೇಟೆ ತಾಲ್ಲೂಕಿನಲ್ಲಿ ಒಟ್ಟು 99.75 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:61.75 ಕ್ವಿಂ, ಅಮ್ಮತ್ತಿ:38 ಕ್ವಿಂ.ಗಳು, ಪೆನ್ನಂಪೇಟೆ ತಾಲ್ಲೂಕಿನಲ್ಲಿ ಒಟ್ಟು 253 ಕ್ವಿಂಟಾಲ್ ದಾಸ್ತಾನು ಇದ್ದು ಇದರಲ್ಲಿ ರೈತ ಸಂಪರ್ಕ ಕೇಂದ್ರ ಕಸಬಾ:101.25ಕ್ವಿಂ, ಹುದಿಕೇರಿ:69.75 ಕ್ವಿಂ, ಬಾಳೆಲೆ: 48.5 ಕ್ವಿಂ ಹಾಗೂ ಶ್ರೀಮಂಗಲ :33.5 ಕ್ವಿಂ.ಗಳು ದಾಸ್ತಾನು ಇರುತ್ತದೆ. ಜಿಲ್ಲೆಯಲ್ಲಿ ಒಟ್ಟು 540.91 ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಇರುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share This Article
error: Content is protected !!
";