Ad image

ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ ರೇಣುಕಾಚಾರ್ಯರ ತತ್ವ, ಬದುಕು ಮಹತ್ವಪೂರ್ಣ

Vijayanagara Vani
ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ ರೇಣುಕಾಚಾರ್ಯರ ತತ್ವ, ಬದುಕು ಮಹತ್ವಪೂರ್ಣ
ಬಳ್ಳಾರಿ,ಮಾ.13:
ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಗುರುಗಳಲ್ಲಿ ಒಬ್ಬರು. ಇವರ ತತ್ವ, ಬದುಕಿನ ಚರಿತ್ರೆ ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ ಎಂದು ಕಮ್ಮರಚೇಡು ಕಲ್ಯಾಣ ಸ್ವಾಮಿ ಸಂಸ್ಥಾನ ಮಠದ ಪೂಜ್ಯ ಶ್ರೀ ಕಲ್ಯಾಣ ಮಹಾಸ್ವಾಮಿಯವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.
ರೇಣುಕಾಚಾರ್ಯರು ಬಾಲ್ಯದಲ್ಲೇ ಭಕ್ತಿಯಿಂದ ಪರಿಪೂರ್ಣರಾಗಿದ್ದು, ಋಷಿಗಳ ಜೊತೆಯಲ್ಲಿ ನಿರಂತರ ಜ್ಞಾನಸಾಧನೆ ನಡೆಸಿ, ಶೈವ ತತ್ವಗಳನ್ನು ಆಳವಾಗಿ ಅಧ್ಯಯನ ಮಾಡಿದವರು ಎಂದು ತಿಳಿಸಿದರು.
ತೆಲಂಗಾಣದ ಕೊಲ್ಲಿಪಾಕಿ ಎಂಬ ಸ್ಥಳದಲ್ಲಿ ಜನಿಸಿದರೆಂದು ನಂಬಲಾಗಿದೆ. ಲಿಂಗಾಯತ ಧರ್ಮದ ಮೂಲತಃ ಸಿದ್ಧಾಂತಗಳನ್ನು ಪ್ರತಿಪಾದಿಸಲು ಮತ್ತು ಶೈವ ಪರಂಪರೆಯನ್ನು ಬಲಪಡಿಸಲು ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದರು.
ಇಷ್ಟಲಿ0ಗ ಧಾರಣೆಯ ಮೂಲಕ ಭಗವಂತನನ್ನು ವೈಯಕ್ತಿಕ ಅನುಭವದ ಮೂಲಕ ಅರಿತುಕೊಳ್ಳಬೇಕೆಂಬ ತತ್ವವನ್ನು ರೇಣುಕಾಚಾರ್ಯರು ಪ್ರತಿಪಾದಿಸಿದರು. ಅವಮಾನಿತ ವರ್ಗಗಳನ್ನು ಪ್ರೀತಿಸಿ, ಅವರಿಗೆ ತತ್ವಶಾಸ್ತçದ ಮತ್ತು ಧಾರ್ಮಿಕ ಶಿಕ್ಷಣ ನೀಡಿದರು ಎಂದು ತಿಳಿಸಿದರು.
ಸಮಾನತೆ ಎಂಬ ತತ್ವಕ್ಕೆ ಮಹತ್ವ ನೀಡಿ, ಅದರಲ್ಲಿ ಎಲ್ಲಾ ವರ್ಣಗಳೂ ಸಮಾನವೆಂಬ ನಂಬಿಕೆಯನ್ನು ಹರಡಿದರು. ರೇಣುಕಾಚಾರ್ಯರ ಜೀವನ ಮತ್ತು ತತ್ವಗಳು ಶಿವಪುರಾಣ, ಬಸವಪುರಾಣ ಮತ್ತು ಇತರ ಶೈವ ಪುರಾಣಗಳಲ್ಲಿ ವಿವರಿಸಲಾಗಿದೆ. ಇವರ ತತ್ವಗಳು ಇಂದು ಸಮಾಜದ ಸಮಾನತೆ, ಧಾರ್ಮಿಕ ಸಮರಸತೆ ಮತ್ತು ಆಧ್ಯಾತ್ಮಿಕ ಪ್ರಗತಿಗೆ ಆಧುನಿಕ ದಾರಿದೀಪಗಳಾಗಿವೆ ಎಂದು ಬಿಂಬಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಗಣ್ಯರು ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಸಂಧ್ಯಾ ಕೋಲಾಚಲಂ ತಂಡದಿ0ದ ಭಕ್ತಿ ಸಂಗೀತ ಗಾಯನ ಪ್ರಸ್ತುತ ಪಡಿಸಿದರು. ಕುಡಿತಿನಿಯ ಪ್ರೇಮ್ ಸಾಗರ್ ಅವರಿಂದ ಯಕ್ಷಗಾನ ನೃತ್ಯ ಹಾಗೂ ಡ್ರಿಮ್ ವರ್ಲ್ಡ್ ಶಾಲೆ ವಿದ್ಯಾರ್ಥಿಗಳಿಂದ ‘ಭೂ ಲೋಕದಲ್ಲಿ ವೀರಶೈವ ಧರ್ಮ ಸ್ಥಾಪನೆ’ ಎಂಬ ಕಿರುನಾಟಕ ಪ್ರದರ್ಶಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮುದಾಯದ ಐವರು ಗಣ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಮಹಾನಗರ ಪಾಲಿಕೆಯ ಸದಸ್ಯರಾದ ಸುರೇಖಾ ಮಲ್ಲನಗೌಡ, ವೀರಶೈವ ವಿದ್ಯಾವರ್ಧಕ ಸಂಘದ ಜಿಲ್ಲಾಧ್ಯಕ್ಷ ಡಾ.ಕಣೇಕಲ್ ಮಹಾಂತೇಶ, ಹರಗಿನಡೋಣಿ ಪಂಚಮಣಿಗಿ ಸಂಸ್ಥಾನ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿ, ಮೇಟಿ ದೊಡ್ಡಪ್ಪನವರ ವೈದಿಕ ಜೋತಿಷ್ಯ ಪಾಠಶಾಲೆಯ ಡಾ.ಪಂಪಾಪತಿ ಶಾಸ್ತಿ, ಅಂತಾಪುರದ ಪಂಡಿತ ಶರಣರು  ಚೊಕ್ಕ ಬಸವನಗೌಡ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
*ಸಂಭ್ರಮದ ಮೆರವಣಿಗೆಗೆ ಮೇಯರ್ ಚಾಲನೆ:*
ಶ್ರೀ ಜಗದ್ಗುರ ರೇಣುಕಾಚಾರ್ಯ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಂಭ್ರಮದಿ0ದ ನಡೆಯಿತು. ಮೆರವಣಿಗೆಗೆ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಅವರು ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು. ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊ0ಡಿತು

Share This Article
error: Content is protected !!
";