ಮಾನ್ವಿ: ಪಟ್ಟಣದ ಶಾರದಾ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆದ ಪ್ರಥಮ ಪಿ.ಯು. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಶಾರಾದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ ಹೈಂದವಿ ಮಧುಸೂದನ್ ಗುಪ್ತಾಜೀ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಮರ್ಪಣಾ ಮನೋಭಾವದಿಂದ ಉಪನ್ಯಾಸಕರ ಮಾರ್ಗದರ್ಶನದಲ್ಲಿ ನಿರಂತರವಾಗಿ ಕಠಿಣ ಅಭ್ಯಾಸವನ್ನು ನಡೆಸಿದಾಗ ಮಾತ್ರ ಜೀವನದಲ್ಲಿ ಉನ್ನತವಾದ ಸಾಧನೆಯನ್ನು ತೋರುವುದಕ್ಕೆ ಸಾಧ್ಯವಾಗುತ್ತದೆ ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಸಾಧ್ಯ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಚಂದ್ರಶೇಖರ್ ಹೂಗಾರ್ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿದಾಗ ಮಾತ್ರ ಉನ್ನತ ಶಿಕ್ಷಣ ಪಡೆಯುವುದಕ್ಕೆ ಪ್ರವೇಶ ಪಡೆಯುವುದಕ್ಕೆ ಸಾಧ್ಯವಾಗುತ್ತದೆ ಹಾಗೂ ಐ.ಎ.ಎಸ್.ಮತ್ತು ಐ.ಪಿ.ಎಸ್, ನಂತಹ ಪರೀಕ್ಷೆಗಳನ್ನು ಯಶಸ್ವಿಯಾಗಿ ಬರೆಯುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿ ನಿಂಗಮ್ಮ ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವೀರಭದ್ರಯ್ಯ ಹಿರೇಮಠ ಶಾರಾದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಕಿಶೋರ್ ಕುಮಾರ ,ಅಧ್ಯಕ್ಷರಾದ ಉಮಾಮಹೇಶ್ವರಿ ಮಧುಸೂದನ್ ಗುಪ್ತಾಜೀ,ಮಂಜುಳಾ ಕಿಶೋರ್ ಕುಮಾರ್ , ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಬ್ರಹ್ಮ ಕುಮಾರ್ ಕುಲಕರ್ಣಿ ,ಉಪನ್ಯಾಸಕರಾದ ಮಹಾಂತಗೌಡ, ಬಂದೇನವಾಜ್, ಸುರೇಂದ್ರ, ವೀರಭದ್ರಯ್ಯ ಸ್ವಾಮಿ, ಶರಣಬಸವ ಪಾಟೀಲ್, ಮಾರಯ್ಯ ಅರೋಲಿ, ಪಾರ್ವತಿ ಹಿರೇಮಠ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು