ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮದ್ಯವ್ಯಸನದಿಂದ ನೆಲಕ್ಕೆ ಬಿದ್ದ ವ್ಯಕ್ತಿಗಳನ್ನು ಮೇಲಕ್ಕೆತ್ತಿ ಪ್ರೀತಿಯಿಂದ ಅಪ್ಪಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ನಿರಂಜನ ಪ್ರಭು ಮಹಾಸ್ವಾಮಿಗಳು ಶ್ಲಾಘಿಸಿದರು.
ಪಟ್ಟಣದಲ್ಲಿ ಭಾನುವಾರ ಜರುಗಿದ ಮದ್ಯವರ್ಜನ ಶಿಬಿರ ಮುಕ್ತಾಯ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಮನುಷ್ಯನಾಗಿ ಜನ್ಮತಾಳಿದ ಮೇಲೆ ಪ್ರತಿಯೊಬ್ಬರಿಗೂ ನೋವು ನಲಿವುಗಳಿರುತ್ತವೆ. ಅವುಗಳ ಮಧ್ಯೆ ನೊಂದವರನ್ನು ಸಂತೈಸಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.
ಸಿಪಿಐ ವಿಶ್ವನಾಥ ಹಿರೇಗೌಡರ್ ಮಾತನಾಡಿ, ಮದ್ಯವ್ಯಸನಕ್ಕೆ ಬಲಿಯಾದವರು ಕುಟುಂಬಕ್ಕೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮಾರಕವಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆಯೋಜಿಸುವ ಮದ್ಯವರ್ಜನ ಶಿಬಿರಗಳನ್ನು ರಾಜ್ಯದ ವಿವಿಧ ಭಾಗಗಳ ಸಾವಿರಾರು ಕುಟುಂಬಗಳಲ್ಲಿ ಬೆಳಕು ಮೂಡಿಸಿದೆ. ಸಂಸ್ಥೆಯ ಕಾರ್ಯಕ್ಕೆ ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಗೀಶ್ ಆಶಾಪುರ ಅಧ್ಯಕ್ಷತೆ ವಹಿಸಿದ್ದರು.
ಸಿರುಗುಪ್ಪ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಜನಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಪ್ಪ, ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಎಂ.ಎ. ಹಾಲಪ್ಪ ಮಾತನಾಡಿದರು.
ಮದ್ಯವರ್ಜನ ಶಿಬಿರದ ಪ್ರಾದೇಶಿವ ಯೋಜನಾಧಿಕಾರಿ ವೈ.ನಾಗೇಶ್ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ಮಾತನಾಡಿದರು.
ಶಿಬಿರಾಧಿಕಾರಿ ದಿವಾಕರ ಪೂಜಾರಿ, ಆರೋಗ್ಯ ಸಹಾಯಕಿ ಶ್ವೇತಾ, ಚೇಗೂರು ಷಣ್ಮುಖ, ಎಂ.ಪಂಪಾಪತಿ, ಡಾ.ಯುಬಿ.ಶ್ರೀನಿವಾಸ, ಕೆ.ಗಿರೀಶ್, ಮೇಲ್ವಿಚಾರಕ ಎಂ.ಪ್ರಭು ಮತ್ತು ರೇಖಾ, ಸಂಜೀವ್ ಕುಮಾರ್, ಸಚಿನ್, ಶಾಮಿಯಾನ ಮೌಲಾಲಿ, ಡಾ. ಸ್ವರ್ಣಲತಾ ಮತ್ತು ವಿಶಾಲಾಕ್ಷಿ ಆಶಾಪುರ ಇದ್ದರು.
ಕುರುಗೋಡಿನಲ್ಲಿ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಸಿಪಿಐ ವಿಶ್ನಾಥ ಹಿರೇಗೌಡರ್ ಮಾತನಾಡಿದರು