Ad image

ಬೆಂಬಲ ಬೆಲೆ ಯೋಜನೆ: ಕುಸುಬೆ ಖರೀದಿ ಕೇಂದ್ರಗಳ ಪ್ರಾರಂಭ

Vijayanagara Vani
ಕೊಪ್ಪಳ ಮಾರ್ಚ್ 21  ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕುಸುಬೆ ಉತ್ಪನ್ನ ಖರೀದಿಸುವ ಸಂಬAಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಪ್ರತಿ ಕ್ವಿಂಟಾಲ್‌ಗೆ ರೂ. 5940 ಗಳಂತೆ ಎಕರೆಗೆ 4 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್ ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಅಳವಂಡಿ, ಹಾಗೂ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
ನೋಡಲ್ ಅಧಿಕಾರಿಗಳ ವಿವರ: ಕುಸುಬೆ ಖರೀದಿ ಕೇಂದ್ರ ಅಳವಂಡಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಕುಸುಬೆ ಖರೀದಿ ಕೇಂದ್ರ ಬೇವೂರಿಗೆ ಯಲಬುರ್ಗಾ(ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಪ್ರತಿ ಎಕರೆಗೆ ಗರಿಷ್ಠ 05 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕುಸುಬೆ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆಯನ್ನು ಮಾತ್ರ ಖರೀದಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕೊಪ್ಪಳದ ರಾಯಚೂರು ವಿಭಾಗೀಯ ಕಛೇರಿ ಎಣ್ಣೆ ಬೀಜ ಬೇಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಕೊಪ್ಪಳ ದೂ.ಸಂ: 9591812142, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article
error: Content is protected !!
";