ಬಳ್ಳಾರಿ,ಮಾ.25
ಯುವಕ-ಯುವತಿಯರು ಮದ್ಯ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೇ ಉತ್ತಮ ಆದರ್ಶ ಜೀವನ ರೂಪಿಸಿಕೊಳ್ಳಬೇಕು ಎಂದು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಚೌದ್ರಿ ಅವರು ಹೇಳಿದರು.
ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಬಳ್ಳಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಎ,ಬಿ,ಸಿ ಮತ್ತು ಡಿ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಮದ್ಯ ಮತ್ತು ಮಾದಕ ದುಷ್ಪರಿಣಾಮ’ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವು ಹೂವಿನಂತೆ ಸುಂದರವಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಸಹ ದಾಸರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.
ವಿದ್ಯಾರ್ಥಿಗಳು ದುಶ್ಚಟಗಳಿಗೆ ವ್ಯಸನಿಗಳಾಗದೇ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕು. ತಮ್ಮ ಮನೆಯ ನೆರೆ-ಹೊರೆಯಲ್ಲಿ ಯಾರಾದರೂ ವ್ಯಸನಿಗಳು ಕಂಡುಬAದಲ್ಲಿ ಆರೋಗ್ಯ ಇಲಾಖೆಯ ಸಂಬAಧಿಸಿದ ವಿಭಾಗಕ್ಕೆ ಮಾಹಿತಿ ನೀಡಬೇಕು. ಇದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ, ಮದ್ಯ ಮತ್ತು ಮಾದಕ ವಸ್ತುಗಳಿಗೆ ಅವಲಂಬಿತರಾದವರು ಮಾನಸಿಕವಾಗಿ, ಶಾರೀರಿಕವಾಗಿ ಕುಗ್ಗುತ್ತಾರೆ. ಇದರಿಂದ ತನ್ನ ಜೀವನ ಮತ್ತು ಕುಟುಂಬವು ಕಷ್ಟದಲ್ಲಿ ಸಿಲುಕುತ್ತದೆ. ಹಾಗಾಗಿ ಮನುಷ್ಯನು ಶಾರೀರಿಕವಾಗಿ, ದೈಹಿಕವಾಗಿ ಸದೃಢನಾಗಿರಬೇಕೆಂದರೆ ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಹೇಳಿದರು.
ಮದ್ಯ-ಮಾದಕ ವಸ್ತು ವ್ಯಸನಿಗಳಾಗಿದ್ದಲ್ಲಿ ರಾಜ್ಯ ಸರ್ಕಾರವು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ ಮನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಸಹಾಯವಾಣಿಗೆ ಕರೆ ಮಾಡಿ ಆಪ್ತಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, 16 ರಿಂದ 22 ರ ವಯಸ್ಸಿನ ಯುವ ಸಮುದಾಯದಲ್ಲಿ ಹೆಚ್ಚಾಗಿ ಮಾದಕ ವಸ್ತುಗಳಿಗೆ ವ್ಯಸನಿಗಳಾಗುವುದು ಕಂಡುಬರುತ್ತಿದ್ದು, ಪ್ರಸ್ತುತದಲ್ಲಿ ಶೇ.55 ರಷ್ಟು ಈ ವಯಸ್ಸಿನ ಅಂತರದ ಯುವ ಸಮುದಾಯವು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಯುವಕರು ಮೊಬೈಲ್ ಗೀಳಿಗೆ ದಾಸರಾಗಬಾರದು. ಚಲನಚಿತ್ರಗಳನ್ನು ಮನರಂಜನೆ ದೃಷ್ಟಿಯಿಂದ ನೋಡಬೇಕು. ಒಳ್ಳೆಯ ಸಂದೇಶ ಮಾತ್ರ ಆಯ್ಕೆ ಮಾಡಬೇಕು. ಕೆಟ್ಟ ಅಭ್ಯಾಸಗಳನ್ನು ಅನುಕರಣೆ ಮಾಡಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಗುರಿಯನ್ನಿಟ್ಟುಕೊಂಡು ಮುನ್ನಡೆಯಬೇಕು. ತಮ್ಮಲ್ಲಿನ ಪ್ರತಿಭೆಯನ್ನು ಅರಿತುಕೊಳ್ಳಬೇಕು. ದೇಶದ ಭವಿಷ್ಯವು ಈಗಿನ ಯುವ ಸಮುದಾಯವೇ. ಅದಕ್ಕಾಗಿ ದೇಶ ಕಟ್ಟುವ ಪ್ರತಿಭೆಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಬಳಿಕ ಗಣ್ಯರು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಟೆಲಿ ಮನಸ್ ಎಂಬ 14416 ಉಚಿತ ಸಹಾಯವಾಣಿಯ ಜಾಗೃತಿ ಭಿತ್ತಿಚಿತ್ರ ಪ್ರದರ್ಶಿಸಿದರು.
ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಎ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಬಿ.ರಾಮಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಪ್ರವೀಣ್ ಕುಮಾರ್ ಅವರು ಗಣ್ಯರನ್ನು ಸ್ವಾಗತಿಸಿದರು. ಬಿ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಚನ್ನಬಸವಯ್ಯ ಹೆಚ್.ಎಂ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಡಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ನಾಜಿಯಾ ಖಾಜಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮೇಶ್.ಹೆಚ್., ಮಲ್ಲೇಶಪ್ಪ.ವೈ., ಹನುಮಂತಪ್ಪ.ವಿ, ಶ್ರೀಧರ ಕಾವಲಿ ಸೇರಿದಂತೆ ಕಾಲೇಜಿನ ಭೋದಕ-ಭೋದಕೇತರ ಸಿಬ್ಬಂದಿ, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.