Ad image

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಯೋಜನೆ

Vijayanagara Vani
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಯೋಜನೆ

 

ಸಿರುಗುಪ್ಪ,: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಿರುಗುಪ್ಪ ಘಟಕದ ವತಿಯಿಂದ ಶನಿವಾರದಂದು ತಾಲೂಕು ಹಂತದಲ್ಲಿ ಕಬ್ಸ್ ,ಬುಲ್ ಬುಲ್ಸ್ ,ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯನ್ನು ನಗರದ ಗುರುಭವನದಲ್ಲಿ ಶನಿವಾರದಂದು ಏರ್ಪಡಿಸಲಾಗಿತ್ತು. ಸದರಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಧರ್ ರವರು ಮಾತನಾಡಿ “ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಾಲಾ ಮಕ್ಕಳಿಗೆ ಮುಂದಿನ ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಪ್ರಗತಿಗಾಗಿ ಏನಾದರೂ ಮಾಡಬೇಕೆನ್ನುವ ಮನೋಭಾವನೆ ಬೆಳೆಸುತ್ತದೆ. ಈ ತರಬೇತಿಯಿಂದ ಮಕ್ಕಳಲ್ಲಿ ಸಾಮಾಜಿಕ ಪ್ರಜ್ಞೆ ಮೌಲ್ಯಗಳು, ಸದ್ಗುಣಗಳನ್ನು ಜಾಗೃತ ಗೊಳಿಸಿ ಸಮಾಜ ಮತ್ತು ದೇಶ ಕಟ್ಟುವಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ನೆರವಾಗುತ್ತದೆ” ಎಂದರು. ಸದರಿ ಸ್ಪರ್ಧೆಯಲ್ಲಿ ಶ್ರೀ ಕೃಷ್ಣದೇವರಾಯ ಆಂಗ್ಲ ಮಾಧ್ಯಮ ಶಾಲೆ, ಶಾಂತಿಕೇತನ ಆಂಗ್ಲ ಮಾಧ್ಯಮ ಶಾಲೆ, ಜಾಗಿ ನರಸಮ್ಮ ನರಸಯ್ಯ ಶಾಲೆ, ಎಸ್.ಇ.ಎಸ್ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ದೇಶನೂರು ಸದಾಶಿವಡ್ಡಿ ಶಾಲೆ, ಹೊಸ ದೇವಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಳಿಗನೂರಿನ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ಶಿಕ್ಷಕರಾದ ಎಂ. ಮಂಜುನಾಥ ಅಂಗಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಶಿಕ್ಷಕಿಯರಾದ ಶ್ರೀಮತಿ ಜೆ.ಗೀತಾ, ವರಮಹಾಲಕ್ಷ್ಮಿ ಭಾಗವಹಿಸಿದ್ದರು. ಅಂತಿಮವಾಗಿ ಸ್ಪರ್ಧೆಯಲ್ಲಿ ಸ್ಕೌಟ್ ವಿಭಾಗದಲ್ಲಿ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ದೇಶನೂರು ಸದಾಶಿವ ರೆಡ್ಡಿ ಪ್ರೌಢಶಾಲೆ ದ್ವಿತೀಯ, ಶ್ರೀ ಕೃಷ್ಣದೇವರಾಯ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ತೃತೀಯ ಸ್ಥಾನವನ್ನು ಪಡೆದರು. ಗೈಡ್ಸ್ ವಿಭಾಗದಲ್ಲಿ ಹೊಸದೇವಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಥಮ, ದೇಶನೂರು ಸದಾಶಿವ ರೆಡ್ಡಿ ಶಾಲೆಯ ಮಕ್ಕಳು ದ್ವಿತೀಯ ಹಾಗೂ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ತೃತೀಯ ಸ್ಥಾನವನ್ನು ಪಡೆದರು. ಕಬ್ಸ್, ಬುಲ್ ಬುಲ್ಸ್ ವಿಭಾಗದಲ್ಲಿ ಶ್ರೀ ಕೃಷ್ಣದೇವರಾಯ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಪ್ರಥಮ ಬಹುಮಾನವನ್ನು ಪಡೆದರು. ವಿಜೇತ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವೇದಿಕೆಯಲ್ಲಿ ಗಣ್ಯರು ವಿತರಿಸಿದರು.


ಸದರಿ ಕಾರ್ಯಕ್ರಮದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹಾಗೂ ಶಿಕ್ಷಣ ಸಂಯೋಜಕರಾದ ಹನುಮನ ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಖಜಾಂಜಿಯಾದ ಎಂ. ಬಸವನಗೌಡ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಿರುಗುಪ್ಪ ಘಟಕದ ಕಾರ್ಯದರ್ಶಿಯಾದ ನಟರಾಜ ಸ್ವಾಮಿ, ಜಂಟಿ ಕಾರ್ಯದರ್ಶಿಯಾದ ಸುಧೀಂದ್ರ, ಮುಖ್ಯಗುರು ಮತ್ತು ಸ್ಕೌಟ್ ಮಾಸ್ಟರ್ ಆದ ಜೆ. ಅಮರೇಶ ಮತ್ತು ಇತರ ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share This Article
error: Content is protected !!
";