ಅತ್ಕೂರು ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಇ.ಒ ಮಾನಪ್ಪ ಕಟ್ಟಿಮನಿ ಭೇಟಿ.

Vijayanagara Vani
ಅತ್ಕೂರು ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಇ.ಒ ಮಾನಪ್ಪ ಕಟ್ಟಿಮನಿ ಭೇಟಿ.
ಇಂದು ರಾಯಚೂರು ತಾಲೂಕಿನ ಅತ್ಕೂರು ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನಪ್ಪ ಕಟ್ಟಿಮನಿ ರವರು ಭೇಟಿ ನೀಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರೊಂದಿಗ ವಿಷೇಶ ಸಭೆಯನ್ನು ನಡೆಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಜಾಗೃತಿ ಮತ್ತು ಮಳೆಗಾಲದ ಪ್ರಯುಕ್ತ ಕುಡಿಯುವ ನೀರಿನ ಬಳಕೆಯ ಹಾಗೂ ಸಾರ್ವಜನಿಕರಿಗೆ ಶೌಚಾಲಯದ ಬಳಕೆಯ ಬಗ್ಗೆ ಮಾಹಿತಿ ನೀಡಬೇಕೆಂದು ಸಿಬ್ಬಂದಿಗೆ ಸೂಚಿಸಿದರು. ನಂತರ ಪಂಚಾಯಿತಿ ಸಿಬ್ಬಂದಿ, ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮನೆಮನೆಗೆ ಭೇಟಿ ನೀಡಿ ಮಳೆಗಾಲದ ಪ್ರಯುಕ್ತ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ಸಲಹೆ ನೀಡಿದರು. ಹಾಗೂ ಶೌಚಾಲಯಗಳನ್ನು ನಿಯಮಿತವಾಗಿ ಬಳಸಲು ಸಾರ್ವಜನಿಕರಿಗೆ  ತಿಳಿಸಿದರು. ಈ ಸಂದರ್ಭದಲ್ಲಿ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ. ಲತೀಫ್, ಕಾರ್ಯದರ್ಶಿ ಪದ್ಮರೆಡ್ಡಿ, Bill colecter ಚನ್ನಪ್ಪ, ಸಿಬ್ಬಂದಿ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!