ಬಳ್ಳಾರಿ,ಏ.08
ಬಳ್ಳಾರಿ(ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 64 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಆಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬoಧಿಸಿದoತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಆಯ್ಕೆಪಟ್ಟಿಯನ್ನು ಸಂಬoಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಏ.22 (ರಜೆ ದಿನಗಳನ್ನು ಹೊರತುಪಡಿಸಿ) ರಂದು ಮಧ್ಯಾಹ್ನ 1.30 ರ ವರೆಗೆ ಸಂಬ0ಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-268609 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.