ಬೆಂ ಗ್ರಾ ಜಿಲ್ಲೆ, ಜ.26):- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ “76ನೇ ಗಣರಾಜ್ಯೋತ್ಸವ”ದ ಅಂಗವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ವಿಭಾಗದ ಪೋಲಿಸ್ ಸಿಬ್ಬಂದಿ, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
◆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ:-
1. ಶ್ರೀ ಲಕ್ಷ್ಮೇಗೌಡ (ಕೃಷಿ ಕ್ಷೇತ್ರ) ದೊಡ್ಡಬಳ್ಳಾಪುರ ತಾಲ್ಲೂಕು.
2. ಶ್ರೀ ಜೆ. ಆರ್ ಮುನಿವೀರಣ್ಣ(ಸಮಾಜ ಸೇವೆ) ದೇವನಹಳ್ಳಿ ತಾಲ್ಲೂಕು.
3. ಶ್ರೀಮತಿ ಓಬಮ್ಮ (ಜನಪದ ಕ್ಷೇತ್ರ) ದೊಡ್ಡಬಳ್ಳಾಪುರ ತಾಲ್ಲೂಕು.
4. ಶ್ರೀ ಷಫೀರ್ ಅಹ್ಮದ್(ಕನ್ನಡ ಪರ ಸೇವೆ) ದೊಡ್ಡಬಳ್ಳಾಪುರ ತಾಲ್ಲೂಕು.
5. ಶ್ರೀ ಮನೋಜ್ ಕೆ.(ಕ್ರೀಡೆ.ನೆಟ್ ಬಾಲ್) ದೇವನಹಳ್ಳಿ ತಾಲ್ಲೂಕು.
6. ಜಾಹ್ನವಿ ಎ. (ಕ್ರೀಡೆ.ಟೆಕ್ವಾಂಡೊ) ಹೊಸಕೋಟೆ ತಾಲ್ಲೂಕು.
7.ಎನ್.ಜಿ.ಗೋಪಾಲ್ (ಸಂಕೀರ್ಣ) ನೆಲಮಂಗಲ ತಾಲ್ಲೂಕು.
ಇಬ್ಬರು ಅಂಗಾಂಗ ದಾನಿಗಳಿಗೆ ಅಭಿನಂದನೆ:-
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಗಾಂಗ ದಾನಿಗಳಾದ “ಶ್ರೀನಿವಾಸ್” ರವರ ಕುಟುಂಬ ಸದಸ್ಯರಿಗೆ ಹಾಗೂ ನೆಲಮಂಗಲ ತಾಲ್ಲೂಕಿನ ಅಂಗಾಂಗ ದಾನಿಗಳಾದ “ಮುನಿರಾಜಯ್ಯ” ರವರ ಕುಟುಂಬ ಸದಸ್ಯರಿಗೆ ಸಚಿವರು ಸನ್ಮಾನಿಸಿ ಅಭಿನಂದನೆ ವ್ಯಕ್ತಪಡಿಸಿದ್ದರು.
ಈ ಇಬ್ಬರ ಅಂಗಾಂಗ ದಾನದಿಂದ 8 ಜನರ ಜೀವ ಉಳಿಸಿ ಸಾರ್ಥಕತೆ ಮೆರೆದಿದ್ದಾರೆ.