ಬಳ್ಳಾರಿ,ಜು.25
ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಜಿಲ್ಲೆಯ ಬೆಳೆಗಳಾಗಿವೆ.
*ವಿವಿಧ ಬೆಳೆಗಳ ಬೆಳೆ ವಿಮೆಗೆ ಕೊನೆಯ ದಿನ:*
ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಕಡಲೆ, ಸಜ್ಜೆ- ಆಗಸ್ಟ್ 16.
ಮುಸುಕಿನ ಜೋಳ, ಜೋಳ, ಹತ್ತಿ, ಸೂರ್ಯಕಾಂತಿ, ತೊಗರಿ, ಈರುಳ್ಳಿ, ಕೆಂಪು ಮೆಣಸಿನಕಾಯಿ-ಜುಲೈ 31.
ನೋಂದಾಯಿಸಿಕೊಳ್ಳಲು ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು.
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡೆಯದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿ0ತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.