Ad image

ರಾಮನಗರದ ಎಸ್.ಓ.ಜಿ.ಕಾಲೋನಿ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ

Vijayanagara Vani
ರಾಮನಗರದ ಎಸ್.ಓ.ಜಿ.ಕಾಲೋನಿ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ
ದಾವಣಗೆರೆ ಜು.03  ದಾವಣಗೆರೆ ರಾಮನಗರದ ಎಸ್ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಐವರು ಗಂಭೀರವಾಗಿ ಗಾಯಗೊಂಡಿದ್ದು ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.
ಒಟ್ಟು 5 ಜನರು ಚಿಕಿತ್ಸೆ ಪಡೆಯುತ್ತಿದ್ದು ವಿಶೇಷ ತಜ್ಞ ವೈದ್ಯರು ನಿಗಾವಹಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಗಾಯಾಳುಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಚಿಕಿತ್ಸೆ ನೀಡಲು ತಿಳಿಸಿದರು.
ಒಟ್ಟು ಐದು ಜನರಲ್ಲಿ ಲಲಿತಮ್ಮ ಇವರಿಗೆ ಹೆಚ್ಚಿನ ಗಾಯವಾಗಿದೆ, ಸೌಭಾಗ್ಯ, ಪಾರ್ವತಮ್ಮ ಇವರಿಗೆ ಶೇ 50 ಕ್ಕಿಂತ ಹೆಚ್ಚು ಗಾಯವಾಗಿದೆ. ಉಳಿದ ಇಬ್ಬರಿಗೆ ಶೇ 50 ಕ್ಕಿಂತ ಕಡಿಮೆ ಇದೆ. ಗಾಯವು ನಂಜಾಗದಂತೆ ನೋಡಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಗುಣಮುಖರಾಗುವಂತೆ ನೋಡಿಕೊಳ್ಳಲು ತಿಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಸರ್ಜನ್ ಅವರು ಗಾಯಾಳುಗಳ ನಿಗಾವಹಿಸಲು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಸರ್ಜನ್ ಡಾ; ನಾಗೇಂದ್ರಪ್ಪ ಹಾಗೂ ಎಸ್.ಎಸ್.ಹೈಟೆಕ್ ಆಸ್ಪತ್ರೆ ವೈದ್ಯರು ಉಪಸ್ಥಿತರಿದ್ದರು.

Share This Article
error: Content is protected !!
";