Ad image

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Vijayanagara Vani
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

 

ಬಳ್ಳಾರಿ,ಮಾ.17
ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಮಾ.18 ರಿಂದ 21 ರ ವರೆಗೆ ಲೋಕೋಪಯೋಗಿ ಇಲಾಖೆಯ ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-ಎ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
————-

Share This Article
error: Content is protected !!
";