Ad image

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

Vijayanagara Vani
ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ ಆಗಸ್ಟ್ 06 : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ ಪ್ರಸಿದ್ದಿ ಪಡೆದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವೇರಿ ಶ್ರೀ ಆಂಜನೇಯ ಸ್ಚಾಮಿ ದರ್ಶನ ಪಡೆದರು.
ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಭಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಕುಟುಂಬ ಸದಸ್ಯರ ಜೊತೆಗೆ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 30 ನಿಮಿಷದಲ್ಲಿ ಏರಿದರು. ನಂತರ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು. ನಂತರ ಗೌರವಾನ್ವಿತ ರಾಜ್ಯಪಾಲರು 20 ನಿಮಿಷದಲ್ಲಿ ಬೆಟ್ಟವನ್ನು ಇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ ಸೇರಿದಂತೆ ಇತರೆ ಅಧಿಕಾರಿಗಳು
ಉಪಸ್ಥಿತರಿದ್ದರು.

Share This Article
error: Content is protected !!
";