Ad image

2024ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Vijayanagara Vani

 

ರಾಯಚೂರು ಜೂನ್ 6 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವ಼ರ್ಷದಂತೆ 2024ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ನಾನಾ ಪ್ರಕಾರಗಳ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸಲು ಕೃತಿಗಳು 2024ರ ಜನವರಿ 01 ರಿಂದ 2024ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು.
ಯಾವ ಯಾವ ಪ್ರಕಾರಗಳು: ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಗ್ರಂಥ ಸಂಪಾದನೆ, ವೈಚಾರಿಕ / ಅಂಕಣ ಬರಹ, ಅನುವಾದ, ಲೇಖಕರ ಮೊದಲ ಸ್ವತಂತ್ರಕೃತಿ, ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಮತ್ತು ಗಜಲ್ ಕಾವ್ಯ ಪ್ರಕಾರಗಳಲ್ಲಿ ಬಹುಮಾನ ನೀಡಲಾಗುತ್ತದೆ.
2024ನೇ ವರ್ಷದ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟಾçರ್ ಅಂಚೆ / ಕೋರಿಯರ್ ಮೂಲಕ ಅಥವಾ ಖುದ್ದಾಗಿ 2025ರ ಜುಲೈ 15ರೊಳಗೆ ತಲುಪಿಸಬೇಕು. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್  https://sahithyaacademy.karnataka.gov.in   ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆವಿಯ ರಿಜಿಸ್ಟಾçರ್ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರುಮುದ್ರಣವಾದ ಪುಸ್ತಕಗಳು, ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಪುಸ್ತಕ ಬಹುಮಾನ ಪಡೆದವರ ಕೃತಿಗಳು ಹಾಗೂ ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ ಎಂಬುದನ್ನು ಲೇಖಕರು ಗಮನಿಸಬೇಕು ಎಂಬುದಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Share This Article
error: Content is protected !!
";