Ad image

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Vijayanagara Vani
ಶಿವಮೊಗ್ಗ, ಜೂನ್ 19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿದ ಎಲ್ಲಾ ಮಕ್ಕಳು ಇಲಾಖೆಯ ವೆಬ್‌ಸೈಟ್ https://awards.gov.in ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

Share This Article
error: Content is protected !!
";