Ad image

ಬೀದಿನಾಯಿಗಳು, ದನಗಳ‌ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು: ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಪಾತ್ರ ಮನವಿ

Vijayanagara Vani

ರಾಯಚೂರು ಜುಲೈ 07 ರಾಯಚೂರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸುಮಾರು 24.75 ಲಕ್ಷ ರೂ ಮೊತ್ತದ ಟೆಂಡರ್ ಕರೆದು, ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸೂಕ್ತ ಕ್ರಮವಹಿಸಲಾಗುತ್ತಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಹೇಳಿದರು.
ಜುಲೈ 07ರ ಸೋಮವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ನೈರ್ಮಲ್ಯ ನಿರೀಕ್ಷಕರು ಹಾಗೂ ಮೇಲ್ವಿಚಾರಕರನ್ನು ಒಳಗೊಂಡಂತೆ ಸುಮಾರು 10 ತಂಡಗಳನ್ನು ರಚಿಸಿ ಪ್ರತಿನಿತ್ಯ ವಿವಿಧ ಬಡಾವಣೆಗಳಲ್ಲಿ ಗಸ್ತಿ ನಡೆಸಿ ಬೀದಿ ನಾಯಿಗಳನ್ನು ಬೇರೆಡೆ ಸಾಗಿಸಲು ಕ್ರಮ ವಹಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಸಂಸ್ಥೆಯೊಂದಕ್ಕೆ ಟೆಂಡರ್ ನೀಡಲಾಗಿದ್ದು, ಸುಮಾರು 1,375 ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಸುವ ಕಾರ್ಯ  ನಡೆಸಲಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ವಿಶೇಷ ಕ್ರಮ ವಹಿಸಲಾಗುತ್ತಿದೆ. ನಾಯಿ, ದನ ಹಾಗೂ ಹಂದಿಗಳ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ರಾಯಚೂರು ನಗರವನ್ನು ಸುಂದರ ಹಾಗೂ ಸ್ವಚ್ಛ ನಗರ ಮಾಡಲು ಸಾಧ್ಯವಿದೆ ಎಂದರು.
ಸಾರ್ವಜನಿಕರು ಘನತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಪಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಬಿಡಾಡಿ ದನಗಳನ್ನು ಹಿಡಿಯುವ ಕಾರ್ಯಾಚರಣೆಯು ಪ್ರಾರಂಭವಾಗಿದ್ದು, ಜನರು ಬಿಡಾಡಿ ದನಗಳನ್ನು ಮನಸಿಗೆ ಬಂದಂತೆ ರಸ್ತೆಯಲ್ಲಿ ಬಿಡಬಾರದು. ಈಗಾಗಲೆ 11 ಸಾವಿರ ದಂಢವಿದಿಸಿ ಕೆಲವು ದನಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಶಾಕೀರ್, ಬಿ.ವೈ.ವಾಲ್ಮೀಕಿ, ಪಶು ವೈದ್ಯಾಧಿಕಾರಿ ಬಸವರಾಜ ಪಾಟೀಲ್, ಪಾಲಿಕೆಯ ಪರಿಸರ ಅಭಿಯಂತರಾರದ ಜೈಪಾಲ ರೆಡ್ಡಿ ಸೇರಿದಂತೆ ಇತರರು ಇದ್ದರು.

Share This Article
error: Content is protected !!
";