ವಿವಿಧ ಇಲಾಖೆಗಳ ಸಮನ್ವಯತೆಯಿಂದ ಮಹಿಳೆಯರಿಗೆ ಯೋಜನೆಗಳು ತಲುಪಲು ಸಾಧ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ: ಪದ್ಮಾವತಿ ಜಿ

Vijayanagara Vani
ವಿವಿಧ ಇಲಾಖೆಗಳ ಸಮನ್ವಯತೆಯಿಂದ ಮಹಿಳೆಯರಿಗೆ ಯೋಜನೆಗಳು ತಲುಪಲು ಸಾಧ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಸ್ವಾವಲಂಬಿಗಳಾಗಿ: ಪದ್ಮಾವತಿ ಜಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆ, ಗೃಹಲಕ್ಷ್ಮಿ ಮೈತ್ರಿ, ಮನಸ್ವಿನಿ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಪಡೆದು ಯೋಜನೆಯ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪದ್ಮಾವತಿ.ಜಿ ಅವರು ಹೇಳಿದರು.

ಬೆಂಗಳೂರು ಗಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಇತರೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ಸಾರ್ವಜನಿಕರ ನಡುವೆಅಧಿಕಾರಿಗಳುಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು. ದಮನಿತರ,ಈಧ್ವನಿ ಇಲ್ಲದವರ, ಬಡವರ, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಬೇಕು. ನಿಟ್ಟಿನಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲು ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸ್ತ್ರೀ ಶಕ್ತಿ ಸಂಘಗಳು, ಇತರೆ ಸ್ವಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ಒದಗಿಸಿ ಆರ್ಥಿಕವಾಗಿ ಸಬಲೆಯರನ್ನಾಗಿ ಮಾಡುವುದು ನಿಗಮದ ಗುರಿಯಾಗಿದೆ ಎಂದು ಹೇಳಿದರು.

ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕೂಡ ಗೃಹಲಕ್ಷ್ಮಿಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಪಡಿತರ ಚೀಟಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧ್ಯಕ್ಷರಾದ ಪದ್ಮಾವತಿ ಜಿ ಅವರು ನೀಡಿದರು.ಮಹಿಳೆಯರಿಗಾಗಿ ಸರ್ಕಾರ ತಂದಿರುವ ವಿವಿಧಯೋಜನೆಗಳ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳಲ್ಲಿಪಡೆದುಕೊಳ್ಳಬಹುದಾಗಿದ್ದು, ಉದ್ಯೋಗಿನಿ, ಸಂಜೀವಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಅಮೃತ ಯೋಜನೆ, ಸಮೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನಸೇರಿದಂತೆ ಮಹಿಳಾಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳು ಇದ್ದು, ಮಹಿಳೆಯರು ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ ಎಂದರು.ನಂತರ ಮಹಿಳಾ ಉದ್ದಿಮೆದಾರರೊಂದಿಗೆ ಸಂವಾದ ನಡೆಸಿ ಕುಂದು ಕೊರತೆ ಆಲಿಸಿ,ಉದ್ದಿಮೆಗಳ ಬಗೆಗಿನ ಅಭಿಪ್ರಾಯ ಪಡೆದುಕೊಂಡರು ಹಾಗೂ ವಿವಿಧ ಯೋಜನೆಗಳಡಿ ಸೌಲಭ ಪಡೆದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಅಕ್ಕಮಹಾದೇವಿ, ಜಿ.ಪಂ ಯೋಜನಾ ನಿರ್ದೇಶಕ ವಿಠಲ ಕಾವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮುದ್ದಣ್ಣ, ಅಂಬೇಡ್ಕ‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹೇಶ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನಿತಾ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ವಿಜಯ್ ಕುಮಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ ಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಸಿ.ಡಿ.ಪಿ.ಒ ಗಳು, ಜಿಲ್ಲಾ ಮಹಿಳಾ ಅಭಿವೃದ್ಧಿ ಘಟಕ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!