ಬಳ್ಳಾರಿ,ಜೂ.19
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಷಿ ಅವರು ಜೂ.21 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜೂ.20 ರಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿ0ದ ಹೊರಟು, ಜೂ.21 ರಂದು ಬೆಳಿಗ್ಗೆ 05 ಗಂಟೆಗೆ ಬಳ್ಳಾರಿಗೆ ಆಗಮಿಸಿ, ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ಕಲಬುರಗಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ರಾಯಚೂರು ಜಿಲ್ಲಾ ಕಸಾಪ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು.
ಬಳಿಕ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಲ್ಲಿ ಜರುಗುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಹಿರಿಯ ಸಾಹಿತಿಗಳು, ಇತರೆ ಕನ್ನಡಪರ ಸಂಘ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.
ನಂತರ ಸಂಜೆ 04 ಗಂಟೆಗೆ ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿರುವ ಆದರ್ಶ ಕಲ್ಯಾಣ ಮಂಟಪದಲ್ಲಿ ಜರುಗಲಿರುವ ಪರಿಷತ್ತಿನ 108 ನೇಯ ಹಾಗೂ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಸ್ಥಳ ವೀಕ್ಷಣೆ ಮಾಡುವರು.
ಬಳಿಕ ಹೊಸಪೇಟೆಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.