Ad image

ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Vijayanagara Vani
ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.19
ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ತರಬೇತಿ ಪಡೆಯುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವರ್ಷದೊಳಗಿರಬೇಕು.
*ತರಬೇತಿಯ ವಿವರ:*
ಆಹಾರ ಮತ್ತು ಪಾನೀಯ ಪಾನೀಯಗಳ ವಿತರಣೆ (ಪುಡ್ ಅಂಡ್ ಬೆವರೇಜ್ ಸರ್ವೀಸ್): ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ 10 ನೇ ತರಗತಿ ಉತ್ತಿರ್ಣರಾಗಿರಬೇಕು.
ವಿವಿಧ ಆಹಾರ ತಯಾರಕರು (ಮಲ್ಟಿ ಕ್ಯೂಸೆನ್ ಕುಕ್): ತರಬೇತಿಯ ಕಾಲಾವಧಿ 5 ತಿಂಗಳು ಹಾಗೂ 8 ನೇ ತರಗತಿ ಉತ್ತೀರ್ಣರಾಗಿರಬೇಕು.
ಕೊಠಡಿ ನಿರ್ವಹಣೆ (ರೂಂ ಅಟೆಂಡAಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.
ಸ್ವಾಗತಕಾರರು: ತರಬೇತಿಯ ಅವಧಿ 4 ತಿಂಗಳು (12 ನೇ ತರಗತಿ ಉತ್ತೀರ್ಣರಾಗಿರಬೇಕು).
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್‌ಎಂ ಬೆಂಗಳೂರು ಮತ್ತು ಎಫ್‌ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಊಟ, ವಸತಿ ಹಾಗೂ ಪ್ರೋತ್ಸಾಹಧನದ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08392-228537, ಮೊ.9740477810 ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರ ಮೊ.7406648594 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";