Ad image

ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ

Vijayanagara Vani
ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ
ಚಿತ್ರದುರ್ಗಜುಲೈ24:
ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಬೇಸಾಯಶಾಸ್ತ್ರಜ್ಞ ವಿಭಾಗದ ಪ್ರಾಧ್ಯಾಪಕ ಎಂ.ಟಿ.ಸಂಜಯ್ ಮಾತನಾಡಿ, ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯ ಬೆಳೆಗಳ ಬಿತ್ತನೆ ಸಮಯ, ಅವಧಿ, ತಳಿಗಳು, ಶೀಫಾರಸ್ಸು ಮಾಡಿದ ರಸಗೊಬ್ಬರ, ಕೊಟ್ಟಿಗೆ ಗೊಬ್ಬರ, ಜೈವಿಕ ಗೊಬ್ಬರ, ಅಂತರ ಬೆಳೆ, ನೀರಾವರಿ, ಕಳೆ ನಿರ್ವಹಣೆ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ರುದ್ರಮುನಿ ಮಾತನಾಡಿ, ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳಲ್ಲಿ ಬರುವ ಪ್ರಮುಖ ಕೀಟಗಳು ಮತ್ತು ರೋಗಗಳು, ಬಾಧೆಯ ಲಕ್ಷಣಗಳು, ಜೀವನ ಚಕ್ರ ಮತ್ತು ಅವುಗಳ ನಿರ್ವಹಣೆ ಕ್ರಮಗಳ ಕುರಿತು ರೈತರಿಗೆ ಮನವರಿಕೆ ಮಾಡಿದರು.
ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ರೈತರಿಗೆ ಪತ್ರಿಕೆ ಮಾಧ್ಯಮ, ಆಕಾಶವಾಣಿ, ವ್ಯಾಟ್ಸಾಪ್ ಮತ್ತು ಫೇಸ್ಬುಕ್ ಮೂಲಕ ವ್ಯಾಪಕ ಪ್ರಚಾರ ಮಾಡಿ ತರಬೇತಿಗೆ ಹಾಜರಾಗಲು ಆಸಕ್ತಿ ಇರುವ ರೈತರನ್ನು ನೋಂದಾಯಿಸಿಕೊಂಡು ಹಂಗಾಮು ಆಧಾರಿತ ಕೃಷಿ ಮತ್ತು ಕೃಷಿ ಸಂಬAಧಿತ ವಿಷಯಗಳ ಕುರಿತು ಸಾಂಸ್ಥಿಕ ಮತ್ತು ಗೂಗಲ್ ಮೀಟ್ ಮೂಲಕ ಆನ್‌ಲೈನ್ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯ ಪ್ರಗತಿಯಲ್ಲಿದ್ದು, ರೈತರಿಗೆ ಜಿಲ್ಲೆಯ ಪ್ರಮುಖಏಕದಳ ಬೆಳೆಗಳಾದ ಮುಸುಕಿನಜೋಳ, ರಾಗಿ, ಜೋಳ ಮತ್ತು ದ್ವಿದಳಧಾನ್ಯ ಬೆಳೆಗಳಾದ ತೊಗರಿ, ಹೆಸರು, ಅವರೆ, ಅಲಸಂಧೆ, ಮತ್ತು ಸೋಯ ಅವರೆ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಹಾಗೂ ಕೀಟ ರೋಗಗಳ ನಿರ್ವಹಣೆಯ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರುತ್ತಾ, ಇನ್ನು ಪರಿಣಾಮಕಾರಿಯಾಗಿ ಹೆಚ್ಚಿನ ರೈತಬಾಂಧವರು ಈ ಕೇಂದ್ರದಿಂದ ನಡೆಸುವ ತರಬೇತಿಗಳ ಉಪಯೋಗ ಪಡೆಯಲು ತಾವು ಸಹಿತ ತಮಗೆ ಗೊತ್ತಿರುವ ರೈತಬಾಂಧವರಿಗೆ ತರಬೇತಿಯ ಮಾಹಿತಿಯನ್ನು ತಿಳಿಸಲು ಮನವಿ ಮಾಡಿದರು.
ಫೋಟೋ ವಿವರ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕ ಆರ್. ರಜನೀಕಾಂತ, ಕೃಷಿ ವಿಶ್ವವಿದ್ಯಾನಿಲಯ ಬೇಸಾಯಶಾಸ್ತ್ರಜ್ಞ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಟಿ.ಸಂಜಯ್ ಹಾಗೂ ಜಿಲ್ಲೆಯ ರೈತಬಾಂಧವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

Share This Article
error: Content is protected !!
";