ಕೊಪ್ಪಳ ಏಪ್ರಿಲ್ 04 (ಕರ್ನಾಟಕ ವಾರ್ತೆ) ಸಮಿತಿಯವರು ನಿಗಾವಹಿಸಬೇಕೆಂದು ಕಲಬುರಗಿ ವಿಭಾಗದ ಪ್ರಭಾರಿ ಪ್ರಾದೇಶಿಕ ಆಯುಕ್ತರಾದ ಎಂ.ಸುಂದರೇಶ ಬಾಬು ಹೇಳಿದರು.
ಅವರು ಗುರುವಾರ ಸಂಜೆ ಡಿಸ್ಟ್ರಿಬ್ಯೂಟರ ನಂಬರ್-17 ದಾಸನಾಳ ಬ್ರಿಜ್ ಗಂಗಾವತಿ ಇಲ್ಲಿಗೆ ಅಧಿಕಾರಿಗಳೊಂದಿಗೆ ಆಗಮಿಸಿ ತುಂಗಭದ್ರಾ ಎಡದಂಡೆ ಕಾಲುವೆಗಳಿಗೆ ಹರಿಸಲಾದ ನೀರಿನ ಸಮರ್ಪಕ ಹಂಚಿಕೆಗೆ ಸಂಬಂದಪಟ್ಟಂತೆ ಖುದ್ದಾಗಿ ಕಾಲುವೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ತುಂಗಭದ್ರಾ ಎಡದಂಡೆ ಕಾಲುವೆಗೆ ಭೇಟಿ ನೀಡಿ ಸರಿಯಾದ ಪ್ರಮಾಣದಲ್ಲಿ ನೀರಿನ ಹರಿವನ್ನು ಖಾತ್ರಿ ಪಡಿಸಿಕೊಂಡು 3 ಸಾವಿರ ಕ್ಯೂಸೆಕ್ಸನಂತೆ ತುಂಗಭದ್ರಾ ಎಡದಂಡೆ ಕಾಲುವೆಗಳಿಗೆ ಹರಿಸಲಾಗುತ್ತಿರುವ ನೀರು ಈಗಾಗಲೇ ವಿವಿಧ ಡಿಸ್ಟ್ರಿಬ್ಯೂಟಗಳಿಗೆ ಹಂಚಿಕೆಯಂತೆ ಹರಿಸುವದರ ಜೊತೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ವಡ್ಡರಹಟ್ಟಿ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಎಮ್.ಎಸ್ ಗೋಡೆಕರ್ ಹಾಗೂ ಗಂಗಾವತಿ ತಹಶಿಲ್ದಾರ, ಟಾಸ್ಕಪೋರ್ಸ್ ಸಮಿತಿ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.