ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

Vijayanagara Vani
ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ
ಚಿತ್ರದುರ್ಗಜುಲೈ24:
ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ ವಾಸುದೇವ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಉಚ್ಛ ನ್ಯಾಯಲಯ, ಬೆಂಗಳೂರು ಅವರು ರಿಟ್ ಅರ್ಜಿ ಸಂಖ್ಯೆ 38157/2011 ರನ್ವಯ ಚಿತ್ರದುರ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಭೇಟಿ ನೀಡಿ, ಅಲ್ಲಿನ ಕಟ್ಟಡ ಪರಿಸ್ಥಿತಿ ಹಾಗೂ ಪೌಷ್ಠಿಕ ಆಹಾರ ಪೂರೈಕೆ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿರುತ್ತಾರೆ. ಅದರನ್ವಯ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ 3ನೇ ಕ್ರಾಸ್‌ನಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಜೋಗಿಮಟ್ಟಿ ರಸ್ತೆಯ ಡಿ.ಐ.ಸಿ ಹಿಂಭಾಗದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ ವಾಸುದೇವ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಅಂಗನವಾಡಿ ಕೇಂದ್ರದ ಕಟ್ಟಡ ಹಾಗೂ ನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ ವಾಸುದೇವ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
WhatsApp Group Join Now
Telegram Group Join Now
Share This Article
error: Content is protected !!