ಕುರುಗೋಡು ಮತ್ತು ಕಂಪ್ಲಿ ತಾಲೂಕಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದ ಯೋಜನೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಪ್ರತಿಯೊಬ್ಬ ಅಧಿಕಾರಿಗಳು ಮುಂದಾಗಬೇಕು ಎಂದು ಜಿಪಂ. ಮುಖ್ಯ ಯೋಜನಾಧಿಕಾರಿ ಹಾಗೂ ಆಡಳಿತ ಅಧಿಕಾರಿ ವಾಗೀಶ್ ಶಿವಾಚಾರ್ಯ ಕರೆ ನೀಡಿದರು.
ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕುರುಗೋಡು ಮತ್ತು ಕಂಪ್ಲಿ ತಾಪಂ. ವ್ಯಾಪ್ತಿಯ ಗ್ರಾಪಂ.ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಳಿಯ ಲೆಕ್ಕ ಪರಿಶೋಧಕ ಅಡ್ಹಾಕ್ ಸಮಿತಿ ಕಂಡಿಕೆಗಳನ್ನು ತಿರುವಳಿ ಗೊಳಿಸುವುದು, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ, ಸಾಮಾಜಿಕ ಲೆಕ್ಕ ಪರಿಶೋಧಕ ಕಂಡಿಕೆಗಳ ತಿರುವಳಿ, ಮಹಿಳಾ ಭಾಗವಹಿಸುವಿಕೆ, ಸ್ವಚ್ಛ ಭಾರತ್ ಮಿಷನ್ ಭೌತಿಕ ಹಾಗೂ ಆರ್ಥಿಕ ಪ್ರಗತಿ, ಆಸ್ತಿಗಳ ಸೃಜನೆ, ತೆರಿಗೆ ವಸೂಲಾತಿ, ಆಸ್ತಿಗಳ ಸಮೀಕ್ಷೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು. ನಂತರ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಶೀಘ್ರವಾಗಿ ಮುಗಿಸುವಂತೆ ಸೂಚಿಸಿದರು. ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ತಾಪಂ. ಇಓ ಕೆವಿ.ನಿರ್ಮಲ, ನರೇಗಾ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ, ಅಡಿಪಿಆರ್ ಅನೀಲ್ ಕುಮಾರ್, ಟಿಪಿಓ ರಾಧಿಕಾ, ಬಸವನಗೌಡ, ರಾಜಶೇಖರಗೌಡ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ. ಪಿಡಿಓಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
—————————–