ಕೊಪ್ಪಳ ಜುಲೈ 14: ಯಲಬುರ್ಗಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ವಾಲ್ಮೀಕಿ ಆಶ್ರಮ ಶಾಲೆ, ಯಡೋಣಿಯಲ್ಲಿ 6 ಮತ್ತು 7ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-1 ಹಾಗೂ ಬಾಲಕಿಯರು-10 ಒಟ್ಟು 11 ಸ್ಥಾನಗಳು ಹಾಗೂ 7ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-2 ಹಾಗೂ ಬಾಲಕಿಯರು-2 ಒಟ್ಟು 04 ಸ್ಥಾನಗಳು ಖಾಲಿ ಇದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದ್ದು, ಶಾಲೆ ಅಥವಾ ಯಲಬುರ್ಗಾದ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿ ಹಾಗೂ ಪಾಲಕರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಹಿಂದಿನ ತರಗತಿಯ ಗ್ರೇಡ್ ಮತ್ತು ಅಂಕ ನಮೂದಿಸಿರುವ ಅಂಕಪಟ್ಟಿ, ಶಾಲಾ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ 02 ಭಾವಚಿತ್ರ, ವಿದ್ಯಾರ್ಥಿಯ ಆರೋಗ್ಯ ತಪಾಸಣೆ ವರದಿಯನ್ನು ಲಗತ್ತಿಸಬೇಕು.
ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಸ್ಥಳೀಯ ತಾಲೂಕಾ ಹಾಗೂ ಈ ಹಿಂದಿನ ತರಗತಿಯಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುವುದು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.