Ad image

ಸಂತ್ರಸ್ತೆ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ, ಪಾಲಕರಿಗೆ ಸಾಂತ್ವನ

Vijayanagara Vani
ಸಂತ್ರಸ್ತೆ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ, ಪಾಲಕರಿಗೆ ಸಾಂತ್ವನ
ಕೊಪ್ಪಳ ಜುಲೈ 18: ಬೆಂಗಳೂರಿಗೆ ದುಡಿಯಲೆಂದು ಹೋದ ಜಿಲ್ಲೆಯ ಕುಟುಂಬವೊAದರ ಬಾಲಕಿಯ ಮೇಲೆ ಜುಲೈ 09 ರಂದು ಯಾರೋ ಅಪರಿಚಿತರು ಲೈಂಗಿಕ ಅಪರಾಧಗಳನ್ನು ಎಸಗಿ ಅವಳನ್ನು ಕೊಲೆ ಮಾಡಿದ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತಸ್ವಾಮಿ ಪೂಜಾರ ಅವರು ಶುಕ್ರವಾರದಂದು ಬಾಲಕಿಯ ಮನೆಗೆ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಮಾತನಾಡಿದ ಆಯೋಗದ ಸದಸ್ಯರು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ನಿಯಮಾವಳಿಗಳು-2020 ರನ್ವಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಬಲ ವ್ಯಕ್ತಿಗಳನ್ನು ನೇಮಕ ಮಾಡಲು, ಮಧ್ಯಂತರ ಪರಿಹಾರಕ್ಕೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸುವಂತೆ ಹಾಗೂ ಘಟಕದಿಂದ ಲಭ್ಯ ಯೋಜನೆಯಲ್ಲಿ ಕುಟುಂಬಕ್ಕೆ ಆರ್ಥಿಕ ಸಹಾಯ ಲಭ್ಯವಿದ್ದಲ್ಲಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳರವರಿಗೆ ಸೂಚಿಸಿದರು. ಅಲ್ಲದೇ ಸಮುದಾಯದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ಶಾಲೆ, ಕಾಲೇಜುಗಳ ವ್ಯಾಪ್ತಿಯಲ್ಲಿ ಮಕ್ಕಳಿಗೆ ಜಾಗೃತಿಯನ್ನು ಮೂಡಿಸುವಂತೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳರವರಿಗೆ ಸೂಚಿಸಿದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ -2019ರ ಕಲಂ 23 (4)ರಡಿಯಲ್ಲಿ ಸಂತ್ರಸ್ತ ಮಗುವಿನ ಮಾಹಿತಿಯನ್ನು ಯಾವುದೇ ಮಾಧ್ಯಮದಲ್ಲಿ ಪ್ರಕಟಿಸುವುದು, ಪ್ರಚುರ ಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದಕ್ಕೆ 6 ತಿಂಗಳನಿAದ 1 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿರುತ್ತದೆ. ಈ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರಿನಲ್ಲಿ ಪ್ರಕರಣವನ್ನು ಸೋ-ಮೋಟೋ ಪ್ರಕರಣವನ್ನಾಗಿ ದಾಖಲಿಸಿಕೊಳ್ಳಲಾಗುವುದು ಎಂದು ಆಯೋಗದ ಸದಸ್ಯರು ತಿಳಿಸಿದರು.
ಹೊಸಬಂಡಿ ಹರ್ಲಾಪುರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಮಕ್ಕಳ ‘ಗ್ರಾಮ ಪಂಚಾಯತ್ ಮಟ್ಟದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ’ಸಭೆಯ ಆಯೋಜನೆ ಮತ್ತು ಮಕ್ಕಳ ಗ್ರಾಮಸಭೆಗಳ ನಿಯಮಿತ ಆಯೋಜನೆ ಇಲ್ಲದಿರುವುದನ್ನು ಗಮನಿಸಿ ಕಡ್ಡಾಯವಾಗಿ ಆಯೋಜಿಸುವಂತೆ ಸೂಚಿಸಿ ಹಾಗೂ ಮಕ್ಕಳಿಗಾಗಿ ಮೀಸಲಿರುವ ಅನುದಾನಗಳ ಬಳಕೆ ಕುರಿತು ಪರಿಶೀಲಿಸಿ ಸಮರ್ಪಕ ಬಳಕೆ ಮಾಡುವಂತೆ ಸೂಚಿಸಿದರು.
ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ರಕ್ಷಣಾ ನೀತಿ – 2016ರ ಅನುಷ್ಠಾನದ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಗಮನಿಸಿ ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿ, ಬಿಸಿಯೂಟದ ಆಹಾರ ಪದಾರ್ಥದಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಮಕ್ಕಳ ರಕ್ಷಣಾ ನೀತಿ – 2016ರ ಅನುಷ್ಠಾನದ ಕುರಿತು ಪರಿಶೀಲಿಸಲಾಗಿ, ಈ ಕುರಿತು ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಇಲ್ಲದಿರುವುದನ್ನು ಗಮನಿಸಿ ವಿಷಾದವನ್ನು ವ್ಯಕ್ತಪಡಿಸಿ, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಬಾಲ್ಯವಿವಾಹ ನಿಷೇಧಾಧಿಕಾರಿಗಳಾಗಿದ್ದು, ಮಕ್ಕಳ ರಕ್ಷಣೆಯ ಜವಾಬ್ದಾರಿಯಲ್ಲಿ ಇವರೂ ಸಹ ಮುಖ್ಯ ಪಾತ್ರಧಾರಿಗಳಾಗಿದ್ದು, ಶೀಘ್ರವೇ ಎಲ್ಲ ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ – 2016ರನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಿ ಆಯೋಗಕ್ಕೆ ವರದಿ ನೀಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಈ ಸಂದರ್ಭ ಸಮಾಜ ಕಾರ್ಯಕರ್ತ ರವಿಕುಮಾರ ಪವಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‌ರೀಚ್ ವರ್ಕರ್ ಪ್ರತಿಭಾ ಕಾಶಿಮಠ, ಅಂಗನವಾಡಿ ಮೇಲ್ವಿಚಾರಕರಾದ ಸುಮಂಗಲಾ ಸಜ್ಜನ, ಮುನಿರಾಬಾದ್ ಪೊಲೀಸ್‌ಠಾಣೆಯ ಮಹಿಳಾ ಪೊಲೀಸ್ ಸುಧಾ ಉಪಸ್ಥಿತರಿದ್ದರು.

Share This Article
error: Content is protected !!
";