Ad image

ಗಾಂಧಿ ಭವನದಲ್ಲಿ ಮತದಾನ ಪ್ರಾರಂಭ ಅಗತ್ಯ ಸೇವೆಗಳು ಹಾಗೂ ಕರ್ತವ್ಯ ನಿರತ ಮತದಾರರಿಂದ ಮತದಾನ

Vijayanagara Vani
ಗಾಂಧಿ ಭವನದಲ್ಲಿ ಮತದಾನ ಪ್ರಾರಂಭ ಅಗತ್ಯ ಸೇವೆಗಳು ಹಾಗೂ ಕರ್ತವ್ಯ ನಿರತ ಮತದಾರರಿಂದ ಮತದಾನ

ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ಯ ಮೇ. 07 ರ ಮತದಾನ ದಿನದಂದು ಚುನಾವಣೆ ಸಂಬAಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳು ಅಲ್ಲದೆ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಮೇ. 01 ರಿಂದ ಮತ ಚಲಾವಣೆಗೆ ಅವಕಾಶ ಕಲ್ಪಿಸಿದ್ದು, ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿವಿಧ ಅಧಿಕಾರಿ, ಸಿಬ್ಬಂದಿಗಳಿAದ ಮತದಾನ ನಡೆಯಿತು.


ಚುನಾವಣೆ ಕರ್ತವ್ಯ ನಿಮಿತ್ಯ ಮೇ. 07 ರ ಮತದಾನ ದಿನದಂದು ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಕ್ಷೇತ್ರಗಳ ನೌಕರರು ಮೇ. 07 ರಂದು ಮತದಾನ ಮಾಡಲು ಸಾಧ್ಯವಾಗದ ಕಾರಣ ಅಂತಹವರಿಗೆ ಮೇ. 01 ರಿಂದ 03 ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.  ಅದೇ ರೀತಿ  ಮತದಾನ ದಿನದಂದು ಚುನಾವಣೆ ಸಂಬAಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗಳಿಗೆ ಮೇ. 01 ರಿಂದ 06 ರವರೆಗೆ ಮತ ಚಲಾಯಿಸಲು ಅನುಕೂಲವಾಗುವಂತೆ ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ.
ಚುನಾವಣೆ ನಿಮಿತ್ಯ ಮೇ. 07 ರಂದು ಮತದಾನ ನಡೆಯಲಿದ್ದು, ಅಂದು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ವಿವಿಧ ಕ್ಷೇತ್ರಗಳ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಕಲ್ಪಿಸಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಬುಧವಾರದಂದು ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು.  ಅದೇ ರೀತಿ ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.  ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಗಾಂಧಿ ಭವನದಲ್ಲಿನ ಪೋಸ್ಟಲ್ ವೋಟಿಂಗ್ ಸೆಂಟರ್ ಹಾಗೂ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ ಪರಿಶೀ
ಲಿಸಿದರು

Share This Article
error: Content is protected !!
";