Ad image

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು

Vijayanagara Vani
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು
ಬಳ್ಳಾರಿ,ಜು.18
ಪ್ರಸ್ತಕ ಸಾಲಿನಲ್ಲಿ ಮುಂಗಾರು-ಹಂಗಾಮಿನಲ್ಲಿ ಮಳೆ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಯುಕ್ತ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅವರು ಸೂಚನೆ ನೀಡಿದ್ದಾರೆ.
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.
*ವೇಳಾಪಟ್ಟಿ:*
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಜು.19 ರಿಂದ ಸರಾಸರಿ 4100 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.
ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ: ಜು.19 ರಿಂದ ಆ.03 ರಿಂದ ಸರಾಸರಿ 25 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು..
ತುಂಗಭದ್ರಾ ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆ: ಜು.19 ರಿಂದ ಸರಾಸರಿ 650 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.
ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ: ಜು.22 ರಿಂದ ಸರಾಸರಿ 1300 ಕ್ಯೂಸೆಕ್ಸ್ನಂತೆ ನೀರು ಹರಿಸಲಾಗುವುದು.
ರಾಯಬಸವಣ್ಣ ಕಾಲುವೆ: ಈಗಾಗಲೇ ಜು.01 ರಿಂದ 180 ಕ್ಯೂಸೆಕ್ಸ್ನಂತೆ ಹರಿಬಿಡಲಾಗುತ್ತಿದೆ.
ನದಿ ಪೂರಕ: ಸುಮಾರು 1000 ಕ್ಯೂಸೆಕ್ಸ್ ಮತ್ತು ಕಾರ್ಖಾನೆಗಳಿಗೆ 60 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು.
*ರೈತ ಭಾಂದವರಲ್ಲಿ ಮನವಿ:*
ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.
ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
——–

Share This Article
error: Content is protected !!
";