ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಚ್ 25ರಿಮದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ್ದು, ಇಂದು (ಮೇ 09) ಫಲಿತಾಂಶ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ರಾಜ್ಯದ 7 ವಿದ್ಯಾರ್ಥಿಗಳು 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಹಾಗಾದರೆ ಅವರು ಯಾವ ಜಿಲ್ಲೆಯವರು ಹಾಗೂ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರಿನ ಮೇಧಾ ಪಿ ಶೆಟ್ಟಿ, ಹರ್ಷಿತಾ ಡಿಎಂ-ಮಧುಗಿರಿ, ಚಿನ್ಮಯ್-ದಕ್ಷಿಣ ಕನ್ನಡ, ಸಿದ್ಧಾಂತ್-ಚಿಕ್ಕೋಡಿ, ದರ್ಶನ್-ಶಿರಸಿ, ಚಿನ್ಮಯ್-ಶಿರಸಿ, ಶ್ರೀರಾಮ್-ಶಿರಸಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
SSLC ಫಲಿತಾಂಶ ಪರಿಶೀಲಿಸುವುದು ಹೇಗೆ?
* KSEAB ಫಲಿತಾಂಶ ಪುಟಕ್ಕೆ ಹೋಗಿ, karresults.nic.inಗೆ ಭೇಟಿ ನೀಡಿ.
* ನಿಮ್ಮ ನೋಂದಣಿ ಸಂಖ್ಯೆ, ಹುಟ್ಟಿದ ದಿನಾಂಕವನ್ನು ನಮೂದಿಸಿ, ಲಾಗ್ ಇನ್ ಆಗಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.
* ಅಥವಾ ನೀವು ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಆಗಿ ವಿವರವನ್ನು ಹಾಕಿ ಅಲ್ಲಿ ಸಬಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
. * ಬಳಿಕ ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
* ಫಲಿತಾಂಶವನ್ನು ಪರಿಶೀಲಿಸಿದ ಬಳಿಕ ಅಂಕಪಟ್ಟಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ರಾಜ್ಯದಲ್ಲಿ 8,59,967 ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24ನೇ ಸಾಲಿನ ಶೇಕಡಾವಾರು ಫಲಿತಾಂಶ 73.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇಕಡ 10ರಷ್ಟು ಕುಸಿತ ಕಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಇನ್ನು 7 ವಿದ್ಯಾರ್ಥಿಗಳು 624 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ.