ಅಕ್ಷಯ ತೃತೀಯಾ ಏಕೆ ಮತ್ತು ಯಾವಾಗ ಆಚರಿಸುತ್ತೇವೆ ?

Vijayanagara Vani
ಅಕ್ಷಯ ತೃತೀಯಾ ಏಕೆ ಮತ್ತು ಯಾವಾಗ ಆಚರಿಸುತ್ತೇವೆ ?

ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇ ರೀತಿ ದಾನ ನೀಡುವ ಪರಂಪರೆ ಇದೆ. 2024 ರಲ್ಲಿ ಮೇ 10 ರಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುವುದು. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು.

ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಅದನ್ನು ‘ಆಪದ್ಧರ್ಮ’ ಎಂದು ಹೇಳುತ್ತಾರೆ. ಆಪದ್ಧರ್ಮ ಅಂದರೆ ‘ಆಪದಿ ಕರ್ತವ್ಯೋ ಧರ್ಮಃ |’ ಅಂದರೆ ‘ವಿಪತ್ತಿನಲ್ಲಿ ಆಚರಣೆಯಲ್ಲಿ ತರುವಂತಹ ಧರ್ಮ’. ಇಂತಹ ಕಾಲದಲ್ಲಿ ಅಕ್ಷಯ ತೃತೀಯಾ ಬಂದರೆ ಸಂಪತ್ಕಾಲದಲ್ಲಿ ಹೇಳಿದಂತೆ ಕೆಲವು ಧಾರ್ಮಿಕ ಕೃತಿಗಳು ಈ ಸಮಯದಲ್ಲಿ ಮಾಡಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಆಪತ್ಕಾಲದಲ್ಲಿ ಧರ್ಮಾಚರಣೆ ಎಂದು ಏನೆಲ್ಲ ಮಾಡಬಹುದು, ಎಂಬುದರ ಬಗ್ಗೆ ವಿಚಾರವೂ ಮಾಡಲಾಗಿದೆ. ಹಿಂದೂ ಧರ್ಮವು ಮನುಷ್ಯನ ಬಗ್ಗೆ ಎಷ್ಟು ಆಳವಾದ ವಿಚಾರ ಮಾಡಿದೆ, ಎಂಬುದು ಕಲಿಯಲು ಸಿಗುತ್ತದೆ. ಇದರಿಂದ ಹಿಂದೂ ಧರ್ಮದ ಏಕಮೇವಾದ್ವಿತೀಯತೆಯು ಗಮನಕ್ಕೆ ಬರುತ್ತದೆ.

ತಿಥಿ

ವೈಶಾಖ ಶುಕ್ಲ ತೃತೀಯಾ

ಅಕ್ಷಯ ತೃತೀಯಾದ ಮಹತ್ವ

ಅಸ್ಯಾಂ ತಿಥೌ ಕ್ಷಯಮುರ್ಪತಿ ಹುತಂ ನ ದತ್ತಂ|
ತೇನಾಕ್ಷಯೇತಿ ಕಥಿತಾ ಮುನಿಭಿಸ್ತ ತೀಯಾ|
ಉದ್ದಿಶ್ಯ ದೈವತಪಿತೃನ್ಕ್ರಿಯತೇ ಮನುಷ್ಯೈಃ|
ತತ್ ಚ ಅಕ್ಷಯಂ ಭವತಿ ಭಾರತ ಸರ್ವಮೇವ|| – ಮದನರತ್ನ

ಅರ್ಥ: (ಶ್ರೀಕೃಷ್ಣನು ಹೇಳುತ್ತಾನೆ) ಎಲೈ ಯುಧಿಷ್ಠಿರನೇ, ಈ ತಿಥಿಗೆ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ; ಆದುದರಿಂದ ಋಷಿಗಳು ಇದನ್ನು ‘ಅಕ್ಷಯ ತೃತೀಯಾ’ ಎಂದಿದ್ದಾರೆ. ಈ ತಿಥಿಯಂದು ದೇವರು ಮತ್ತು ಪಿತೃಗಳನ್ನುದ್ದೇಶಿಸಿ ಮಾಡಿದ ಕೃತಿಯು ಅಕ್ಷಯ (ಅವಿನಾಶೀ)ವಾಗುತ್ತದೆ.

ಕೆಲವರ ಅಭಿಪ್ರಾಯದಂತೆ ಅಕ್ಷಯ ತೃತೀಯಾ ಕೃತಯುಗ ಅಥವಾ ತ್ರೇತಾಯುಗದ ಆರಂಭದ ದಿನವಾಗಿದೆ.

ಅಕ್ಷಯ ತೃತೀಯಾದಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಆದುದರಿಂದ ಪೃಥ್ವಿಯ ಮೇಲಿನ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವು ಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. ಈ ತಿಥಿಯಂದು ದೇವತೆಗಳನ್ನು ಮತ್ತು ಪಿತೃಗಳನ್ನು ಉದ್ದೇಶಿಸಿ ಮಾಡಿದ ಎಲ್ಲ ಕರ್ಮಗಳೂ ಅಕ್ಷಯ (ಅವಿನಾಶಿ) ವಾಗುತ್ತವೆ. (ಆಧಾರ : ‘ಮದನರತ್ನ’)

ಅಕ್ಷಯ ತೃತೀಯಾವನ್ನು ಆಚರಿಸುವ ಪದ್ಧತಿ

೧. ಸ್ನಾನದಾನಾದಿ ಧರ್ಮಕಾರ್ಯಗಳು : ಕಾಲವಿಭಾಗದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ. ಈ ದಿನ ಅಪಿಂಡಕ ಶ್ರಾದ್ಧವನ್ನು ಮಾಡಬೇಕು, ಅದು ಸಾಧ್ಯವಿಲ್ಲದಿದ್ದರೆ ಕಡಿಮೆಪಕ್ಷ ಎಳ್ಳಿನ ತರ್ಪಣವನ್ನಾದರೂ ಕೊಡಬೇಕು. ದಾನವು ‘ಸತ್ಪಾತ್ರೇ ದಾನ’ವಾಗಿರಬೇಕು. ಸಂತರಿಗೆ ಅಥವಾ ಸಮಾಜದಲ್ಲಿ ಧರ್ಮಪ್ರಸಾರವನ್ನು ಮಾಡುವ ಆಧ್ಯಾತ್ಮಿಕ ಸಂಸ್ಥೆಗಳಿಗೆ ಮಾಡಿದ ದಾನವು ‘ಸತ್ಪಾತ್ರೇ ದಾನ’ವಾಗಿದೆ. ಸತ್ಪಾತ್ರೇ ದಾನವನ್ನು ಮಾಡುವುದರಿಂದ ದಾನದ ಕರ್ಮವು ಅಕರ್ಮಕರ್ಮವಾಗುತ್ತದೆ. ಅಕರ್ಮಕರ್ಮವೆಂದರೆ ಪಾಪ-ಪುಣ್ಯಗಳ ಲೆಕ್ಕಾಚಾರವು ತಗಲದಿರುವುದು. ಇದರಿಂದ ದಾನವನ್ನು ನೀಡುವವನು ಯಾವುದೇ ಬಂಧನದಲ್ಲಿ ಸಿಲುಕದೇ, ಅವನ ಆಧ್ಯಾತ್ಮಿಕ ಉನ್ನತಿಯಾಗಲು ಸಹಾಯವಾಗುತ್ತದೆ.

ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ

ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ?

ದಾನ ಮಾಡುವುದರಿಂದ ಪುಣ್ಯವು ಸಿಗುತ್ತದೆ. ಅಕ್ಷಯ ತದಿಗೆಯ ದಿನ ಮಾಡಿದ ದಾನವು ಯಾವಾಗಲೂ ಕ್ಷಯವಾಗುವುದಿಲ್ಲ. ಅಕ್ಷಯ ತದಿಗೆಯ ದಿನ ಮಾಡಿದ ದಾನದಿಂದ ಬಹಳಷ್ಟು ಪುಣ್ಯ ಸಿಗುತ್ತದೆ. ಬಹಳಷ್ಟು ಪುಣ್ಯವು ಲಭಿಸುವುದರಿಂದ ವ್ಯಕ್ತಿಯ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಯಾವುದಾದರೊಂದು ಜೀವದ ಹಿಂದಿನ ಕರ್ಮಗಳು ಒಳ್ಳೆಯದಾಗಿದ್ದರೆ ಅವನ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಇದರಿಂದ ಅವನಿಗೆ ಸ್ವರ್ಗಪ್ರಾಪ್ತಿಯಾಗಬಹುದು. ಸಾಧಕರಿಗೆ ಪುಣ್ಯವನ್ನು ಪ್ರಾಪ್ತಿಮಾಡಿಕೊಂಡು ಸ್ವರ್ಗಪ್ರಾಪ್ತಿ ಮಾಡಿಕೊಳ್ಳುವುದಿರುವುದಿಲ್ಲ

 

 

WhatsApp Group Join Now
Telegram Group Join Now
Share This Article
error: Content is protected !!