ಮಡಿಕೇರಿ ಆ.01ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಿತು.
ಆಗಸ್ಟ್, 07 ರವರೆಗೆ ನಡೆಯುವ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಕಾರ್ಯಕ್ರಮವನ್ನು ಕೊರತೆಗಳನ್ನು ಕೊನೆಗೊಳಿಸಿ: ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬ ಘೋಷವಾಕ್ಯದೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಚಾಲನೆ ನೀಡಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಧುಸೂಧನ್ ಎ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 1 ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ತನ್ಯಪಾನದ ಪ್ರಯೋಜನಗಳನ್ನು ಉತ್ತೇಜಿಸಲು ಮತ್ತು ಮಕ್ಕಳ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆ/ ತಾಲ್ಲೂಕು ಆಸ್ಪತ್ರೆ, ಸ.ಆ.ಕೇಂದ್ರ, ಪ್ರಾ.ಆ.ಕೇಂದ್ರಗಳಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಸ್ತನ್ಯಪಾನವು ಅಭಿವೃದ್ಧಿಶೀಲ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಉಸಿರಾಟದ ತೊಂದರೆಯನ್ನು ಕಡಿಮೆ ಮಾಡುತ್ತದೆ. ಅಸ್ತಮಾ, ಆಹಾರ ಅಲಜರ್ಿ, ಮಧುಮೇಹ ಮತ್ತು ಅನೀಮಿಯಾ ಆಗುವ ಅಪಾಯಗಳು ಕಡಿಮೆ ಎಂದು ಹೇಳಿದರು.
ಪ್ರಸವದ ನಂತರ ಬರಬಹುದಾದ ಖಿನ್ನತೆ ಕಡಿಮೆಯಾಗುತ್ತದೆ. ಬಾಣಂತಿಯರು ಎದೆಹಾಲಿನ ಮಹತ್ವದ ಬಗ್ಗೆ ಅರಿತು ಮಗು ಜನಿಸಿದ ಒಂದು ಗಂಟೆಯೊಳಗೆ ಹಾಲುಣಿಸುವುದರಿಂದ ಮಗುವಿನ ಬೆಳವಣಿಗೆ ಮತ್ತು ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ.ಪುರುಷೋತ್ತಮ್ ಅವರು ಮಾತನಾಡಿ ದೇಶದಲ್ಲಿ ಎನ್.ಎಫ್.ಹೆಚ್.ಎಸ್ 4ರ ಪ್ರಕಾರ ಮಗು ಜನಿಸಿದ ಒಂದು ಗಂಟೆಯೊಳಗೆ ಎದೆಹಾಲು ಉಣಿಸುತ್ತಿರುವವರ ಸಂಖ್ಯೆ ಕೇವಲ ಶೇ.48 ಇದ್ದು, ಶೇ.52 ರಷ್ಟು ಮಕ್ಕಳು ಒಂದು ಗಂಟೆಯ ಒಳಗಿನ ಎದೆಹಾಲು ಸೇವನೆಯಿಂದ ವಂಚಿತರಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಎದೆಹಾಲು ಬಿಟ್ಟು ಇತರೆ ಬಾಟಲ್ ಹಾಲು ನೀಡುತ್ತಿರುವುದರಿಂದ ಮಕ್ಕಳಿಗೆ ಅಪೌಷ್ಠಿಕತೆ, ಸೋಂಕು ತಗಲುವ ಸಂಭವ ಹೆಚ್ಚು. ಎದೆಹಾಲನ್ನು ಮಗು ಜನಿಸಿದ ಒಂದು ಗಂಟೆಯೊಳಗೆ ಪ್ರಾರಂಭಿಸಿ ಕನಿಷ್ಠ 6 ತಿಂಗಳವರೆಗೆ ನೀಡಬೇಕು ಹಾಗೂ ಗರಿಷ್ಟ 2 ರಿಂದ 3 ವರ್ಷಗಳವರೆಗೂ ನೀಡುವುದು ಉತ್ತಮ ಎಂದು ತಿಳಿಸಿದರು.
ಅಲ್ಲದೇ ಮೂಡನಂಬಿಕೆಗಳಿಂದ ಜೇನುತುಪ್ಪ, ಸಿಹಿನೀರು, ಇತರೆ ಆಹಾರವನ್ನು ಮಗುವಿಗೆ ನೀಡುವುದರಿಂದ ಶಿಶುಗಳಿಗೆ ಸೋಂಕು ತಗಲುವ ಸಂಭವ ಹೆಚ್ಚು. ಅಲ್ಲದೇ ಎದೆನಾಗರ, ಇತರೆ ಕಾಯಿಲೆಗಳಿಗೆ ತಪ್ಪು ನಂಬಿಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ತಿಳಿಸಿದರು. ಅಲ್ಲದೇ ಎದೆಹಾಲಿನ ಮಹತ್ವದ ಬಗ್ಗೆ ಸವಿವರವಾಗಿ ತಿಳಿದುಕೊಳ್ಳಲು ನಂತರ ಆರೋಗ್ಯವಂತ ಶಿಶು ಪ್ರದರ್ಶನವನ್ನು ಇಲಾಖೆ ವತಿಯಿಂದ ನಡೆಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಲು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ.ರವಿಚಂದ್ರ ಅವರು ಮಾತನಾಡಿ ಪ್ರತೀ ಪ್ರಾಣಿಗಳು ತಮ್ಮ ಮಕ್ಕಳಿಗೆ ಹುಟ್ಟಿದ ಕೂಡಲೇ ಎದೆಹಾಲನ್ನು ನೀಡುತ್ತವೆ. ಈಗಿನ ತಾಯಂದಿರು ಮಗು ಜನಿಸಿದ ತಕ್ಷಣ ಎದೆಹಾಲು ನೀಡುವುದು ಕಡಿಮೆ. ತಾಯಿಯ ಎದೆಹಾಲು ಅಮೃತ. ಇದರಲ್ಲಿ ಮಗುವಿಗೆ ಅವಶ್ಯಕವಾದ ಪೋಷಕಾಂಶಗಳು, ರೋಗ ನಿರೋಧಕ ಶಕ್ತಿ ಇದ್ದು, ಮಗುವಿನ ಮೆದುಳಿನ ಬೆಳವಣಿಗೆಗೆ ಅತ್ಯಾವಶ್ಯಕ ಎಂದು ತಿಳಿಸಿದರು.
ಮಕ್ಕಳ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ದಿವ್ಯಾರಾಣಿ ಅವರು ಪಿಪಿಟಿ ಮುಖಾಂತರ ವಿವರಿಸುತ್ತಾ, ಮಗುವಿಗೆ ಜನ್ಮ ನೀಡುವುದು ಒಂದು ಸಂಕೀರ್ಣ ಕ್ರಿಯೆ. ತಾಯಿಯ ಎದೆಹಾಲು ವಿಶ್ವದ ಶ್ರೇಷ್ಠ ಆಹಾರ. ಇದು ಅಮೃತಕ್ಕೆ ಸಮಾನ. ಸಂಪೂರ್ಣ ಪೌಷ್ಠಿಕ ಸಮತೋಲನ ಆಹಾರ. ಭಾವನಾತ್ಮಕ ಸಂಬಂಧದ ಬೆಸುಗೆ, ಸುಲಭವಾಗಿ ಜೀರ್ಣವಾಗುವ, ಸಂರಕ್ಷಿಸಿ ಇಡುವ ಅಗತ್ಯವಿಲ್ಲದ, ಖಚರ್ಿಲ್ಲದ, ಮಗುವಿಗೆ ರುಚಿಯಾದ ಸಿದ್ಧ ಆಹಾರ., ಅಮೃತ ಸಂಜೀವಿನಿ ಎಂದು ತಿಳಿಸಿದರು.
ಅಲ್ಲದೇ ಎದೆಹಾಲಿನ ಮಹತ್ವ, ಎದೆಹಾಲು ಉಣಿಸುವ ಭಂಗಿಗಳು, ಹಾಲುಣಿಸುವಿಕೆಯ ಅಂತರ, ಸ್ತನಗಳ ಆರೈಕೆ, ಹಾಲುಕೊಡುವ ಅವಧಿ, ತಾಯಿಗೆ ಎದೆಹಾಲು ಉಣಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಸವಿವರವಾಗಿ ಉಪನ್ಯಾಸ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಅವರು ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಉದ್ದೇಶಗಳು, ಆಚರಣೆ, ಸೆಮಿನಾರ್ ಆಯೋಜಿಸಿ ಸಾಮಾನ್ಯ ಮಹಿಳೆಯರಿಗೆ ಸ್ತನ್ಯಪಾನದ ಉಪಯುಕ್ತತೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಪ್ರಸ್ತುತಪಡಿಸಲು ಸ್ತ್ರೀರೋಗ ತಜ್ಞರಿಂದ ಉಪನ್ಯಾಸ ಮಾಡಿಸುವುದು. ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಸ್ತನ್ಯಪಾನವನ್ನು ಬೆಂಬಲಿಸುವ ಪ್ರತಿಜ್ಞೆಯನ್ನು ಟಿ.ಎನ್ ಪಾಲಾಕ್ಷ ಸಭೆಯಲ್ಲಿ ಬೋಧಿಸಿದರು.
ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೇಲ್ವಿಚಾರಕರು, ಸಿಬ್ಬಂಧಿಗಳು, ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂಧಿಗಳು, ಗಭರ್ಿಣಿಯರು, ಬಾಣಂತಿಯರು, ಸಾರ್ವಜನಿಕರು ಭಾಗವಹಿಸಿದ್ದರು. ಅಶ್ವಿನಿ ಪ್ರಾಥರ್ಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.