Ad image

ಮಾ.25 ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ

Vijayanagara Vani
ಮಾ.25 ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಮಾ.20
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆ ಬಳ್ಳಾರಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ “ಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆ” ಎಂಬ ಘೋಷವಾಕ್ಯದಡಿ ಮಾ.25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಅವರು ಘನ ಉಪಸ್ಥಿತರಿರುವರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ ಹಾಗೂ ವಿಶೇಷ ಉಪನ್ಯಾಸಕರಾಗಿ ಹಿರಿಯ ವಕೀಲರಾದ ಅಂಕಲಯ್ಯ ಮತ್ತು ಎನ್.ಪ್ರಕಾಶ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆ ಸಹಾಯಕ ನಿಯಂತ್ರಕರಾದ ಅಮೃತಾ ಪಿ. ಚವ್ಹಾಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Share This Article
error: Content is protected !!
";